ಬಿಎಸ್‍ವೈ ವಿರುದ್ಧ ಸುಪ್ರೀಂಗೆ ಅರ್ಜಿ?

ಅಕ್ರಮ ಡಿ ನೋಟಿಫಿಕೇಷನ್ ಆರೋಪ ಸಂಬಂಧ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ 3 ಎಫ್ಐಆರ್‍ಗಳಿಗೆ ಹೈಕೋರ್ಟ್...
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
Updated on: 

ಬೆಂಗಳೂರು: ಅಕ್ರಮ ಡಿ ನೋಟಿಫಿಕೇಷನ್ ಆರೋಪ ಸಂಬಂಧ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ 3 ಎಫ್ಐಆರ್‍ಗಳಿಗೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆ ತೆರವುಗೊಳಿಸಲು ಸುಪ್ರೀಂಕೋರ್ಟ್‍ಗೆ ವಿಶೇಷ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.

ಅಲ್ಲದೆ, ಸುಪ್ರೀಂ ಕೋರ್ಟ್‍ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸುವ ಮೊದಲು ಹೈಕೋರ್ಟ್‍ನಲ್ಲಿಯೇ ಮೇಲ್ಮನವಿ ಸಲ್ಲಿಸಬೇಕು ಎಂಬುದು ಕಾನೂನು ಇಲಾಖೆ ಅಭಿಪ್ರಾಯ. ಈ ಬಗ್ಗೆ ಸರ್ಕಾರ ಮತ್ತು ಲೋಕಾಯುಕ್ತ ಸಂಸ್ಥೆಯ ಉನ್ನತ ಮೂಲಗಳು ಖಚಿತಪಡಿಸಿವೆ.

ಬಿಎಸ್‍ವೈ ವಿರುದ್ಧ ಸುಪ್ರೀಂಗೆ ಮೇಲ್ಮನವಿ ಅರ್ಜಿ?
ಮಹಾಲೇಖಪಾಲರ (ಸಿಎಜಿ) ವರದಿಯ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಯಡಿಯೂರಪ್ಪ ವಿರುದ್ಧ 15 ಎಫ್ಐಆರ್ ಸಲ್ಲಿಸಿದ್ದರು. ಇದರಲ್ಲಿ ಮೂರು ಎಫ್ಐಆರ್‍ಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಬಿ.ಎಸ್. ಯಡಿಯೂರಪ್ಪ ವಿರುದ್ಧದ ಎಫ್ ಐಆರ್‍ಗೆ ಹೈಕೋರ್ಟ್‍ನ ರತ್ನಕಲಾ ಅವರ ನ್ಯಾಯಪೀಠ ತಡೆಯಾಜ್ಞೆ ನೀಡಿತ್ತು.

ಅದರ ತೆರವಿಗಾಗಿ ವಿಶೇಷ ಮೇಲ್ಮನವಿ ಸಲ್ಲಿಸಲು ಅನುಮತಿ ನೀಡುವಂತೆ ಸರ್ಕಾರಕ್ಕೆ ಲೋಕಾಯುಕ್ತ ಪೊಲೀಸ್ ವಿಭಾಗ ಪತ್ರ ಬರೆದಿತ್ತು. ಇದನ್ನು ಆಧರಿಸಿ ಸರ್ಕಾರ ಮೇಲ್ಮನವಿಗೆ ಒಪ್ಪಿಗೆ ನೀಡಿದೆ ಎಂದು ಹೇಳಲಾಗಿದೆ. ಎಫ್ಐಆರ್‍ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವು ದರಿಂದ ಮೊದಲು ಇಲ್ಲೇ ಸಲ್ಲಿಸಿ, ಹೈಕೋರ್ಟ್ ನಡೆ ಆಧರಿಸಿ ಸುಪ್ರೀಂಕೋರ್ಟ್‍ಗೆ ಹೋಗಬಹುದು ಎಂದು ಕಾನೂನು ಇಲಾಖೆ ಅಭಿಪ್ರಾಯ ತಿಳಿಸಿದೆ ಎಂದು ಮೂಲಗಳು ಹೇಳಿವೆ.

ಹೈಕೋರ್ಟ್ ನಲ್ಲಿ ಏನಾಗಿತ್ತು?: ಯಡಿಯೂರಪ್ಪ ಪರ ವಾದಿಸಿದ್ದ ವಕೀಲ ಸಿ.ವಿ.ನಾಗೇಶ್, ಕಾನೂನಿನಲ್ಲಿ ಅವಕಾಶವಿಲ್ಲದಿದ್ದರೂ ವಿನಾಕಾರಣ ಪ್ರಕರಣ ದಾಖಲಿಸಲಾಗಿದೆ. ಖಾಸಗಿ ದೂರಿನ ಆಧಾರದಲ್ಲಿ ದೂರು ದಾಖಲು ಮಾಡುವ ಮೂಲಕ ತಮ್ಮ ಕಕ್ಷಿದಾರರಿಗೆ ವಿನಾಕಾರಣ ಮಾನಸಿಕ ಹಿಂಸೆ ನೀಡಲಾಗುತ್ತಿದೆ.

 ಆದ್ದರಿಂದ ಎಫ್ಐಆರ್ ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದರು. ವಾದ ಪ್ರತಿವಾದ ಆಲಿಸಿದ್ದ ನ್ಯಾಯಪೀಠ, ಬಿಎಸ್‍ವೈ ವಿರುದ್ಧ ಲೋಕಾಯುಕ್ತ ಸಂಸ್ಥೆ ದಾಖಲಿಸಿದ್ದ ಎಫ್ಐಆರ್‍ಗೆ ತಡೆ ನೀಡಿತ್ತು. ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಅಕ್ರಮವಾಗಿ ಡಿ ನೋಟಿಫಿಕೇಷನ್ ಮಾಡಿದ್ದಾರೆಂದು ಸಾಮಾಜಿಕ ಕಾರ್ಯಕರ್ತ ಜಯಕುಮಾರ್ ಹಿರೇಮಠ್ ಅವರು ಸಿಎಜಿ ವರದಿ ಆಧರಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದರು.

ಹೈಕೋರ್ಟ್ ಸೂಚನೆಯಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಸರ್ವೇ ಸಂ.251ರ ಹಲಗೆವಡೇರಹಳ್ಳಿ, ಸರ್ವೇ ಸಂಖ್ಯೆ 5/1 ಮತ್ತು 6/3ರ ಬಿಳೇಕಹಳ್ಳಿ ಮತ್ತು ಸರ್ವೇಸಂಖ್ಯೆ 117ರ ಜೆ.ಬಿ. ಕಾವಲ್‍ನಲ್ಲಿ ಅಕ್ರಮವಾಗಿ ಡಿ ನೋಟಿಫಿಕೇಷನ್ ಮಾಡಿದ್ದು, ಇದು ಸಿಎಜಿ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದರು. ಈ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದರು. ಇದನ್ನು ಪ್ರಶ್ನಿಸಿ ಯಡಿಯೂರಪ್ಪ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಡಿನೋಟಿಫಿಕೇಷನ್: ಬನಶಂಕರಿ 5ನೆ ಹಂತದಲ್ಲಿ 5 ಎಕರೆ. ಆರ್ ಎಂವಿ 2ನೆ ಹಂತದಲ್ಲಿ 33 ಗುಂಟೆ, ಮಹಾಲಕ್ಷ್ಮೀ ಲೇಔಟ್ ನಲ್ಲಿ 1 ಎಕರೆ, ಚಿತ್ರದುರ್ಗು ಜಿಲ್ಲೆಯ ತಮ್ಮ ಅವಧಿಯಲ್ಲಿ ಅಕ್ರಮ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಜಯ ಕುಮಾರ್ ಹಿರೇಮಠ್ ದೂರಿನಲ್ಲಿ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com