ಡಿಕ್ಕಿಯ ರಭಸಕ್ಕೆ ಹೊತ್ತಿ ಉರಿದ 2 ಲಾರಿಗಳು: ಓರ್ವ ಸಜೀವ ದಹನ

ಎರಡೂ ಗೂಡ್ಸ್ ಲಾರಿಗಳು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿರುವ ಘಟನೆ ವಿಯಪುರ ಜಿಲ್ಲೆಯ ಇಂಡಿ...
ಸುಟ್ಟು ಭಸ್ಮವಾದ ಎರಡು ಲಾರಿಗಳು
ಸುಟ್ಟು ಭಸ್ಮವಾದ ಎರಡು ಲಾರಿಗಳು
Updated on
ವಿಜಯಪುರ: ಎರಡೂ ಗೂಡ್ಸ್ ಲಾರಿಗಳು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿರುವ ಘಟನೆ ವಿಯಪುರ ಜಿಲ್ಲೆಯ ಇಂಡಿ ತಾಲೂಕಿನ ಹೋರ್ತಿ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.
ಹೋರ್ತಿ ಬಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಈ ಘಟನೆ ನಡೆದಿದೆ. ವೇಗವಾಗಿ ಬರುತ್ತಿದ್ದ ಎರಡೂ ಗೂಡ್ಸ್ ಲಾರಿಗಳು ಡಿಕ್ಕಿ ಹೊಡೆದಿವೆ. ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ಲಾರಿಗಳು ಹೊತ್ತಿ ಉರಿದಿದ್ದು, ಲಾರಿಗಳಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮವಾಗಿದೆ.
ಘಟನೆಯಲ್ಲಿ ಓರ್ವ ಚಾಲಕ ಸಜೀವ ದಹನವಾಗಿದ್ದು, ಮತ್ತೊಬ್ಬ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com