ಕೈಗಾರಿಕೆಗಳ ವಿದ್ಯುತ್ ರಜೆ ವಾಪಸ್; ರಾಜ್ಕಕ್ಕೆ ಹೆಚ್ಚುವರಿ 2,050 ಮೆ.ವಾ ವಿದ್ಯುತ್

ವಿದ್ಯುತ್ ಉತ್ಪಾದನೆ ಪ್ರಮಾಣದಲ್ಲಿ ಸುಧಾರಣೆಯಾಗಿರುವ ಕಾರಣ ಈಗಾಗಲೇ ಕೈಗಾರಿಕಾ ಕ್ಷೇತ್ರಗಳಲ್ಲಿ ಘೋಷಿಸಲಾಗಿರುವ ವಿದ್ಯುತ್ ರಜೆಯನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ...
ಇಂಧನ ಸಚಿವ ಡಿ.ಕೆ.ಶಿವಕುಮಾರ್
ಇಂಧನ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು: ವಿದ್ಯುತ್ ಉತ್ಪಾದನೆ ಪ್ರಮಾಣದಲ್ಲಿ ಸುಧಾರಣೆಯಾಗಿರುವ ಕಾರಣ ಈಗಾಗಲೇ ಕೈಗಾರಿಕಾ ಕ್ಷೇತ್ರಗಳಲ್ಲಿ ಘೋಷಿಸಲಾಗಿರುವ ವಿದ್ಯುತ್ ರಜೆಯನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಕುರಿತಂತೆ ವಿಕಾಸಸೌಧದಲ್ಲಿ ಮಾತನಾಡಿರುವ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು, ರಾಜ್ಯದಲ್ಲಿ ಇದೀಗ ಹೆಚ್ಚುವರಿಯಾಗಿ 2,050 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಸ್ಕಾಂ ವ್ಯಾಪ್ತಿಯ ಕೈಗಾರಿಕಾ ಕ್ಷೇತ್ರಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುವುದಿಲ್ಲ ಎಂದು ಹೇಳಿದ್ದಾರೆ.

ಮುಂಬರುವ ಬೇಸಿಗೆ ಕಾಲವನ್ನು ದೃಷ್ಟಿಯಲ್ಲಿಟ್ಟಕೊಂಡಿರುವ ಸರ್ಕಾರ ಈಗಾಗಲೇ ಜಲವಿದ್ಯುತ್ ಉತ್ಪಾದನೆ ಸೀಮಿತಿಗೊಳಿಸಿದೆ. ಬೇಸಿಗೆ ಮತ್ತು ಶಾಲಾ ಕಾಲೇಜುಗಳ ವಾರ್ಷಿಕ ಪರೀಕ್ಷೆ ಗಮನದಲ್ಲಿಟ್ಟುಕೊಂಡು ಹೆಚ್ಚುವರಿ 1 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗಾಗಿ ಲಿಂಗನಮಕ್ಕಿ, ಸೂಪೂ ಹಾಗೂ ಮಾಣಿ ಜಲಾಶಯಗಳಲ್ಲಿ ನೀರು ಸಂಗ್ರಹಿಸಲಾಗಿದೆ. ಕೂಡಂಕುಲಂನಲ್ಲೂ ಉತ್ಪಾದನೆ ಆರಂಭಗೊಂಡಿರುವದರಿಂದ ಬೆಸ್ಕಾಂ ವ್ಯಾಪ್ತಿಯಲ್ಲಿ ಉಂಟಾಗಿದ್ದ ವಿದ್ಯುತ್ ಕೊರತೆಯನ್ನು ನೀಗಿಸಲು ಸಾಧ್ಯವಾಗುತ್ತಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com