
ಬೆಂಗಳೂರು: ಸಿಯಾಚಿನ್ ಹಿಮಪಾತದಲ್ಲಿ ಸಿಲುಕಿ ಪವಾಡ ಸದೃಶವಾಗಿ ಬದುಕಿ ಬಂದಿರುವ ಯೋಧನ ಹನುಮಂತಪ್ಪ ಊರಿನಲ್ಲೇ ಇದ್ದರೂ ಸಿಎಂ ಸಿದ್ದರಾಮಯ್ಯ ಅಂದು ಅವರ ಕುಂಟುಂಬಸ್ಥರನ್ನು ಭೇಟಿ ಮಾಡದೇ ವಾಪಸ್ ಬಂದ ವಿಚಾರ ತೀವ್ರ ಟೀಕೆಗೆ ಗುರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಯೋಧ ಹನುಮಂತಪ್ಪ ಕೊಪ್ಪದ ಆರೋಗ್ಯ ವಿಚಾರಿಸಲು ಇಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಇಂದು ಸಂಜೆ 5 ಗಂಟೆಗೆ ಸಿದ್ದರಾಮಯ್ಯ ದೆಹಲಿಗೆ ತೆರಳಿ ರಾತ್ರಿಯೇ ಆರ್‌ಆರ್ ಆಸ್ಪತ್ರೆಗೆ ಭೇಟಿ ನೀಡಲಿದ್ದು, ಕುಟುಂಬಸ್ಥರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ.
ಧಾರವಾಡ ಜಿಲ್ಲೆಯ ಬೆಟದೂರಿನವರಾದ ಹನುಮಂತಪ್ಪ ಕೊಪ್ಪದ್ ಆಸ್ಪತ್ರೆಯಲ್ಲಿ ಬಹು ಅಂಗಾಂಗ ವೈಫಲ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದು, ಕುಟುಂಬ ವರ್ಗ ಅಲ್ಲಿಯೇ ಬೀಡುಬಿಟ್ಟಿದೆ. ಈಗಾಗಲೇ ದೆಹಲಿಯಲ್ಲಿರುವ ಕರ್ನಾಟಕ ಭವನದ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದು, ಕುಟುಂಬದವರ ಹಾಗೂ ಹನುಮಂತಪ್ಪ ಚಿಕಿತ್ಸೆಯ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಮೊನ್ನೆ ಸಿಎಂ ಧಾರವಾಡ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭ ಕುಟುಂಬಸ್ಥರನ್ನು ಭೇಟಿ ಮಾಡಿರಲಿಲ್ಲ.
Advertisement