ಮತ್ತೆ ಕೂಡ್ಲಿಗಿಯಲ್ಲಿ ಡಿವೈಎಸ್ಪಿ ಅನುಪಮಾ ಶೆಣೈ ಅಧಿಕಾರ ಸ್ವೀಕಾರ
ಕೂಡ್ಲಿಗಿ: ಡಿವೈಎಸ್ಪಿ ಅನುಪಮಾ ಶೆಣೈ ಅವರು ಸರ್ಕಾರದ ಆದೇಶದ ಮೇರೆಗೆ ಮತ್ತೆ ಕೂಡ್ಲಿಗಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಲು ಗುರುವಾರ ಅಧಿಕಾರ ವಹಿಸಿಕೊಂಡರು.
ಕೂಡ್ಲಿಗಿ ವಿಭಾಗದಲ್ಲಿ ಇದುವರೆಗೆ ನಡೆದ ಹಾಗೂ ಸದ್ಯ ಆಗಬೇಕಾದ ಕೆಲಸಗಳ ಬಗ್ಗೆ ಅವರು ಪರಿಶೀಲಿಸಿದರು. ನಾನಾ ಸಂಘಟನೆಗಳ ಪದಾಧಿಕಾರಿಗಳು, ಸಾರ್ವಜನಿಕರು, ಅಭಿಮಾನಿಗಳು ಅವರನ್ನು ಕಾಣಲು, ಠಾಣೆ ಆವರಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಅವರ ವರ್ಗಾವಣೆ ಖಂಡಿಸಿ ಬಳ್ಳಾರಿ ಜಿಲ್ಲೆ ಸೇರಿ ಇತರೆಡೆ ಪ್ರತಿಭಟನೆ ಕಾವು ಹೆಚ್ಚುತ್ತಿದ್ದಂತೆ, ರಾಜ್ಯ ಸರಕಾರ ಅವರ ವರ್ಗಾವಣೆ ಆದೇಶ ಹಿಂಪಡೆದಿತ್ತು.
ಡಿವೈಎಸ್ಪಿ ಅನುಪಮಾ ಶೆಣೈ ಅವರು, ಕೂಡ್ಲಿಗಿ ವಿಭಾಗದಲ್ಲಿ ಮತ್ತೊಮ್ಮೆ ಕರ್ತವ್ಯ ನಿರ್ವಹಿಸಲು ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಪಟ್ಟಣದ ನಾನಾ ಸಂಘಟನೆಗಳ ಕಾರ್ಯಕರ್ತರು, ಅಭಿಮಾನಿಗಳು ಡಾ.ಅಂಬೇಡ್ಕರ್ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನನ್ನ ಆರೋಗ್ಯದಲ್ಲಿ ಒಂದಿಷ್ಟು ವ್ಯತ್ಯಾಸವಾಗಿದ್ದರಿಂದ ಈವರೆಗೂ ನಾನು ರಜೆಯ ಮೇಲಿದ್ದೆ. ಈಗ ಸರಕಾರ ಕೂಡ್ಲಿಗಿಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಕಳಿಸಿದ್ದರಿಂದ ಗುರುವಾರ ಅಧಿಕಾರ ವಹಿಸಿಕೊಂಡಿದ್ದೇನೆ ಎಂದು ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ