
ಹಾಸನ: ಸಿಯಾಚಿನ್‌ನಲ್ಲಿ ದುರಂತದಲ್ಲಿ ಮಡಿದ ಯೋಧ ಹಾಸನದ ತೇಜೂರಿನ ಟಿ.ಟಿ.ನಾಗೇಶ್ ಅವರ ಪಾರ್ಥಿವ ಶರೀರದ ದರ್ಶನ ಪಡೆದ ಸಾವಿರಾರು ಅಭಿಮಾನಿಗಳು ಹುತಾತ್ಮ ಯೋಧನಿಗೆ ಅಶ್ರುತರ್ಪಣ ಸಲ್ಲಿಸಿದರು.
ಸೋಮವಾರ ರಾತ್ರಿ ಮೃತ ಯೋಧಮ ದೇಹವನ್ನು ಹಾಸನದ ವೈದ್ಯಕೀಯ ಕಾಲೇಜಿನಲ್ಲಿ ಇರಿಸಿ ಇಂದು ಬೆಳಗ್ಗಿನಿಂದಲೇ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಪಾರ್ಥಿವ ಶರೀರದ ಜತೆ ಬಂದಿದ್ದ ಸೇನೆಯ ಅಧಿಕಾರಿಗಳು ಸರಕಾರಿ ಗೌರವ ಸಲ್ಲಿಸಿದರು.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಗೃಹ ಸಚಿವ ಡಾ.ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು, ಶಾಸಕ ಹೆಚ್.ಎಸ್.ಪ್ರಕಾಶ್, ಸೇರಿದಂತೆ ಹಲವು ಗಣ್ಯರು ಹುತಾತ್ಮ ಯೋಧನಿಗೆ ಅಂತಿಮ ನಮನ ಸಲ್ಲಿಸಿದರು. ಮತ ಯೋಧನ ಪತ್ನಿ ಆಶಾ ಜತೆಗೆ ಹಲವು ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಅಂತಿಮ ದರ್ಶನ ಪಡೆದರು
ಗೃಹ ಸಚಿವ ಡಾ.ಪರಮೇಶ್ವರ್ ಮಾತನಾಡಿ, ಹುತಾತ್ಮ ಯೋಧ ನಾಗೇಶ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರದ ಚೆಕ್ ನೀಡಲಾಗಿದೆ, ಅಲ್ಲದೆ 4 ಎಕರೆ ಭೂಮಿ, ಒಂದು ನಿವೇಶನ, ಮಕ್ಕಳಿಗೆ ಶಿಕ್ಷಣ, ಉದ್ಯೋಗ ಕೊಡಿಸುವುದಾಗಿ ಹೇಳಿದರು.
Advertisement