ಬೈಕ್'ಗೆ ಲಾರಿ ಡಿಕ್ಕಿ: ಓರ್ವ ವಿದ್ಯಾರ್ಥಿ ಸಾವು, ಮತ್ತೊರ್ವ ಗಂಭೀರ
ಬಳ್ಳಾರಿಯ ಸಿರುಗಪ್ಪ ಹೆದ್ದಾರಿ ಬಳಿ ಪರೀಕ್ಷೆ ಬರೆಯಲು ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿ ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ...
ಬೈಕ್'ಗೆ ಲಾರಿ ಡಿಕ್ಕಿ: ಓರ್ವ ವಿದ್ಯಾರ್ಥಿ ಸಾವು, ಮತ್ತೊರ್ವ ಗಂಭೀರ
ಬಳ್ಳಾರಿ: ಬಳ್ಳಾರಿಯ ಸಿರುಗಪ್ಪ ಹೆದ್ದಾರಿ ಬಳಿ ಪರೀಕ್ಷೆ ಬರೆಯಲು ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿ ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.
ಬಳ್ಳಾರಿಯ ಕೌಲ್ ಬಜಾರ್ ನ ನಿವಾಸಿಗಳಾಗ ಭರತ್ (19) ಹಾಗೂ ಅರವಿಂದ್ (19) ಅಪಘಾತಕ್ಕೀಡಾದ ವಿದ್ಯಾರ್ಥಿಗಳಾಗಿದ್ದು, ಇವರು ಐಟಿಐ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇಂದು ಬೆಳಿಗ್ಗೆ ಸೆಮಿಸ್ಟರ್ ಪರೀಕ್ಷೆ ಬರೆಯಲೆಂದು ಕುರುಗೋಡಿಗೆ ಹೋಗುತ್ತಿದ್ದರು.
ಈ ವೇಳೆ ಕೇರಳ ಮೂಲದ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆಯುತ್ತಿದ್ದಂತೆ ಬೈಕ್ ನಿಂದ ವಿದ್ಯಾರ್ಥಿಗಳು ನೆಲಕ್ಕೆ ಜಿಗಿದು ಬಿದ್ದಿದ್ದಾರೆ. ಈ ವೇಳೆ ವಿದ್ಯಾರ್ಥಿಗಳಿಗೆ ತೀವ್ರ ಪೆಟ್ಟಾದ ಕಾರಣ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇದೀಗ ಮತ್ತೋರ್ವ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಸ್ಥಳಕ್ಕಾಗಮಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.