ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿರುವ ನಟ ದರ್ಶನ್ ಮನೆಗೆ ಹೋಗಿ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿ ವಾಪಸ್ಸಾಗುತ್ತಿದ್ದ ಅಭಿಮಾನಿಗೆ ಬಿಎಂಟಿಸಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಕೆಎಸ್ ಆರ್ ಟಿಸಿ ಬಸ್ ಅನ್ನು ಓವರ್ ಟೇಕ್ ಮಾಡಲು ಹೊರಟ ಬಿಎಂಟಿಸಿ ಬಸ್ ಎದುರು ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ. ದರ್ಶನಗೆ ಶುಭಕೋರಿ ಬರುತ್ತಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಾಯಂಡಹಳ್ಳಿಯ ಮೇಲ್ಸೇತುವೆ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ಖಾಸಗಿ ಕಂಪನಿ ಉದ್ಯೋಗಿ ಥಣಿಸಂದ್ರದ ನಿವಾಸಿ ಮಧುಕುಮಾರ್(25) ಮೃತ ದುರ್ದೈವಿ. ಬೈಕ್ ನ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿಲಾಗಿದೆ.