ಕಲಬುರ್ಗಿಯಲ್ಲಿ ಲೋಕಾ ದಾಳಿ; ಪಿಡಬ್ಲ್ಯುಡಿ ಅಧಿಕಾರಿ ಮನೆಯಲ್ಲಿ ದಾಖಲೆ ಪರಿಶೀಲನೆ

ಗುರುವಾರ ಬೆಳಗ್ಗೆ ಲೋಕಾಯುಕ್ತ ಪೊಲೀಸರು ಕಲಬುರ್ಗಿಯಲ್ಲಿ ದಾಳಿ ಮಾಡಿದ್ದು, ಸರ್ಕಾರಿ ಅಧಿಕಾರಿಯೊಬ್ಬರ ಮನೆಯಲ್ಲಿ ಶೋಧ ನಡೆಸಿದ್ದಾರೆ.
ಲೋಕಾಯುಕ್ತ ದಾಳಿ (ಸಂಗ್ರಹ ಚಿತ್ರ)
ಲೋಕಾಯುಕ್ತ ದಾಳಿ (ಸಂಗ್ರಹ ಚಿತ್ರ)
Updated on: 

ಕಲಬುರ್ಗಿ: ಗುರುವಾರ ಬೆಳಗ್ಗೆ ಲೋಕಾಯುಕ್ತ ಪೊಲೀಸರು ಕಲಬುರ್ಗಿಯಲ್ಲಿ ದಾಳಿ ಮಾಡಿದ್ದು, ಸರ್ಕಾರಿ ಅಧಿಕಾರಿಯೊಬ್ಬರ ಮನೆಯಲ್ಲಿ ಶೋಧ ನಡೆಸಿದ್ದಾರೆ.

ಯಾದಗಿರಿ ಜಿಲ್ಲೆಯ ಪಿಡಬ್ಲ್ಯುಡಿ ಅಧಿಕಾರಿ ಶಾಂತಪ್ಪ ಟಕ್ಕೋಜಿ ಅವರ ಕಲಬುರ್ಗಿ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ಇಂದು ಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ  ಮಾಡುತ್ತಿದ್ದಾರೆ. ಕಲಬುರ್ಗಿಯ ಜಯನಗರದ ಡಾಕ್ಟರ್ಸ್ ಕಾಲೋನಿಯಲ್ಲಿರುವ ಮನೆ ಹಾಗೂ ಯಾದಗಿರಿ ಕಚೇರಿ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಸಾಕಷ್ಟು  ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಸುಮಾರು ಒಂದು ಗಂಟೆಗಳ ಕಾಲ ಬೇರೆ ಬೇರೆ ದಾಖಲೆಗಳನ್ನು ಪರಿಶೀಲಿಸಿದ ಲೋಕಾಯುಕ್ತ ಅಧಿಕಾರಿಗಳು ಬಳಿಕ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ  ಅಧಿಕಾರಿಯ ಅಕ್ರಮ ಸಂಪತ್ತಿನ ಕುರಿತು ಯಾವುದೇ ಮಾಹಿತಿ ತಿಳಿದುಬಂದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com