ಸಾಂದರ್ಭಿಕ ಚಿತ್ರ
ಜಿಲ್ಲಾ ಸುದ್ದಿ
ಲೋಕಾಯುಕ್ತ ಪ್ರಕರಣಗಳ ವಿಚಾರಣೆ ವಿಳಂಬ: 3 ವಿಶೇಷ ಕೋರ್ಟ್ ಸ್ಥಾಪನೆ
ಲೋಕಾಯುಕ್ತ ಸಂಸ್ಥೆಯಲ್ಲಿನ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಬೆಂಗಳೂರಿನಲ್ಲಿ ಮೂರು ವಿಶೇಷ ನ್ಯಾಯಾಲಯ...
ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿನ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಬೆಂಗಳೂರಿನಲ್ಲಿ ಮೂರು ವಿಶೇಷ ನ್ಯಾಯಾಲಯ ಸ್ಥಾಪನೆಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರ ಹೈಕೋರ್ಟ್ ಗೆ ಸ್ಪಷ್ಟನೇ ನೀಡಿದೆ. ಫೆಬ್ರವರಿ 10 ರಂದು ರಾಜ್ಯ ಸರ್ಕಾರ ಮೂರು ವಿಶೇಷ ನ್ಯಾಯಾಲಯ ಸ್ಥಾಪನೆಗೆ ಅಧಿಸೂಚನೆ ಹೊರಡಿಸಿದ್ದು, ಮುಂದಿನ ಎರಡು ವಾರಗಳಲ್ಲಿ ಗೃಹಮಂತ್ರಿಗಳ ಅನುಮತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್ ಎಎಸ್ ಪೊನ್ನಣ್ಣ ಶುಕ್ರವಾರ ಹೈಕೋರ್ಟ್ ನ ನ್ಯಾಯಾಮೂರ್ತಿಗಳಿಗೆ ವಿವರಿಸಿದ್ದಾರೆ.
ಲೋಕಾಯುಕ್ತ ಸಂಸ್ಥೆಯಲ್ಲಿನ ಪ್ರಕರಣಗಳ ವಿಚಾರಣೆ ವಿಳಂಬವಾಗುತ್ತಿದೆ ಎಂದು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಎಎನ್ ವೇಣುಗೋಪಾಲ್ ಗೌಡ ಅವರಿದ್ದ ಏಕಸದಸ್ಯ ಪೀಠ, ಲೋಕಾಯುಕ್ತ ನ್ಯಾಯಾಲಯದಲ್ಲಿ ಸಾವಿರಾರು ಪ್ರಕರಣಗಳು ವಿಚಾರಣಾ ಹಂತದಲ್ಲಿಯೇ ಇದೆ. ಇದರಿಂದಾಗಿ ಸಾಕಷ್ಟು ಕುಟುಂಬಗಳು ವಿನಾಕಾರಣ ಸಂಕಷ್ಟಕ್ಕೆ ಸಿಲುಕಿವೆ ಎಂದು ಅಭಿಪ್ರಾಯಪಟ್ಟಿತ್ತು.

