ಹುಬ್ಬಳ್ಳಿ: ಸರ್ಕಾರಿ ಬಸ್ ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.
ಹುಬ್ಬಳ್ಳಿ ತಾಲ್ಲೂಕಿನ ತಡಸ ಕ್ರಾಸ್ ನ ಸಮೀಪ ಸರ್ಕಾರಿ ಬಸ್ ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಶಂಕರ್ ಯಶ್ವಂತ್ (32) ಸೇರಿ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.