ರಾಜ್ಯದಲ್ಲಿ ವಾರದಲ್ಲಿ 5 ದಿನ ಮಾತ್ರ ಕೆಲಸ ಮಾಡುವ ಪದ್ಧತಿ ಜಾರಿಗೆ ತರಲು ಚಿಂತನೆ

ವಾರದಲ್ಲಿ ಕೇವಲ ಐದು ದಿನ ಕೆಲಸ ಮಾಡುವ ಪದ್ಧತಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕಾರ್ಮಿಕ ಕಾಯಿದೆಗೆ ತಿದ್ದುಪಡಿ ತರಲಾಗುತ್ತಿದೆ ಎಂದು ಕಾರ್ಮಿಕ ಇಲಾಖೆ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ವಾರದಲ್ಲಿ ಕೇವಲ ಐದು ದಿನ ಕೆಲಸ ಮಾಡುವ ಪದ್ಧತಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕಾರ್ಮಿಕ ಕಾಯಿದೆಗೆ ತಿದ್ದುಪಡಿ ತರಲಾಗುತ್ತಿದೆ ಎಂದು ಕಾರ್ಮಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಪಿ.ಬಿ. ರಾಮಮೂರ್ತಿ ತಿಳಿಸಿದ್ದಾರೆ.

ಭಾರತೀಯ ಕೈಗಾರಿಕೆಗಳ ಒಕ್ಕೂಟ ನಗರದಲ್ಲಿ ಆಯೋಜಿಸಿದ್ದ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು ''ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆಯಲ್ಲಿ ಹಲವು ಸುಧಾರಣೆಗಳನ್ನು ಜಾರಿಗೊಳಿಸಿದೆ. ಬಹುರಾಷ್ಟ್ರೀಯ ಹಾಗೂ ಐಟಿ - ಬಿಟಿ ಕಂಪನಿಗಳಲ್ಲಿ ಈಗಾಗಲೇ ವಾರದಲ್ಲಿ 5 ದಿನ ಕೆಲಸ ಮಾಡುವ ವ್ಯವಸ್ಥೆ ಜಾರಿಯಲ್ಲಿದ್ದು, ಅದೇ ರೀತಿ ರಾಜ್ಯದಲ್ಲೂ ಈ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ನಿಯಾಮಗಳಿಗೆ ತಿದ್ದುಪಡಿ ತರಲಾಗುತ್ತಿದೆ. ಇದು ಜಾರಿಯಾದರೆ ದಿನದ ಕೆಲಸದ ಅವಧಿ ಹೆಚ್ಚು ಮಾಡಲಾಗುವುದು,'' ಎಂದು ಹೇಳಿದರು.

ಅಪಾಯಕಾರಿಯಲ್ಲದ ಉದ್ಯಮಗಳನ್ನು ಫ್ಯಾಕ್ಟರಿ ಕಾಯಿದೆಯಿಂದ ಪ್ರತ್ಯೇಕಿಸಲು ಹಾಗೂ ಮಹಿಳಾ ಉದ್ಯೋಗಿಗಳಿಗೆ ರಾತ್ರಿಪಾಳಿಯಲ್ಲಿ ಕೆಲಸ ಮಾಡಲು ಅವಕಾಶ ನೀಡುವ ಕುರಿತು ಚಿಂತನೆ ನಡೆಯುತ್ತಿದೆ,'' ಎಂದು ಅವರು ವಿವರಿಸಿದರು.


ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com