
ಬೆಳಗಾವಿ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರಧಾನಿಯವರು ಬರುವ ವೇಳೆಗೆ ಪ್ರತಿಭಟನೆಗೆ ಮುಂದಾಗಿದ್ದ ರೈತರನ್ನು ತಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳಸಾಬಂಡೂರಿ ಯೋಜನೆ ಜಾರಿಗೆ ಆಗ್ರಹ, ಸಾಲಮನ್ನಾ, ಬೆಳೆಗಳಿಗೆ ವೈಜ್ಞಾನಿಕ ಬೆಲೆ ಘೋಷಿಸುವುದು ಸೇರಿದಂತೆ ವಿವಿಧ ಯೋಜನೆಗಳನ್ನು ಮುಂದಿಟ್ಟುಕೊಂಡು ರೈತರು ಇಂದು ಬೆಳಗಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಮೋದಿಯವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಬೇಕೆಂದುಕೊಂಡಿದ್ದರು. ಕರ್ನಾಟಕ ರಾಜ್ಯ ರೈತ ಸಂಘ, ಕಳಸಾ-ಬಂಡೂರಿ ಹೋರಾಟ ಸಮಿತಿ ಮತ್ತು ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಸಂಘಟನೆ ಪ್ರತಿಭಟನೆಗೆ ಮುಂದಾಗಿತ್ತು.
ಆದರೆ ಅವರನ್ನು ಬೆಳಗಾವಿಯ ಹೊರವಲಯದಲ್ಲಿಯೇ ಪೊಲೀಸರು ತಡೆದಿದ್ದಾರೆ. ಪೊಲೀಸರ ಈ ಕ್ರಮಕ್ಕೆ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋದಿಯವರು ಇಂದು ಸಂಜೆ ಫಸಲ್ ಭೀಮಾ ಯೋಜನೆಗೆ ಚಾಲನೆ ನೀಡಲಿದ್ದಾರೆ.
Advertisement