ಪ್ರತ್ಯೇಕ ಅಪಘಾತ: ಆರು ಮಂದಿ ಸಾವು

ರಾಜ್ಯದಲ್ಲಿ ಭಾನುವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೂವರು ವಿದ್ಯಾರ್ಥಿಗಳು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ವಿಜಯಪುರ/ಕುಣಿಗಲ್: ರಾಜ್ಯದಲ್ಲಿ ಭಾನುವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೂವರು ವಿದ್ಯಾರ್ಥಿಗಳು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ.

ವಿಜಯಪುರದ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಬೈಕ್ ಮತ್ತು ಟ್ಯಾಂಕರ್ ಡಿಕ್ಕಿಯಾಗಿ ವಿಜಯಪುರದ ಬಿ.ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಾದ ಸಿಂದಗಿಯ ವಿಶ್ವಾಸ ಸಾಲಿಮಠ (20), ಬೆಂಗಳೂರಿನ ಅವದೇಶಕುಮಾರ (21) ಹಾಗೂ ಕೊಲ್ಕೊತಾದ ಅನಿಂದ್ಯಾ (20) ಮೃತಪಟ್ಟಿದ್ದಾರೆ.

ಇನ್ನು ತುಮಕೂರು ಜಿಲ್ಲೆಯ ಕುಣಿಗಲ್ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಹೊಡೆದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಪುಟ್ಟಮ್ಮ (77), ಲತಾದೇವಿ (53) ಹಾಗೂ ಪ್ರಗತಿ (17) ಮೃತಪಟ್ಟವರು.
ಇವರೆಲ್ಲ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಗಡ್ಲಹಳ್ಳಿಯವರು. ತೀವ್ರ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳುಹಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com