ಜಿಲ್ಲಾ ಸುದ್ದಿ

ರಾಜ್ಯದಲ್ಲಿ ಯೋಗ ಸಂಸ್ಥೆ ಸ್ಥಾಪನೆ

ರಾಜ್ಯದಲ್ಲಿ ಯೋಗ ಸಂಸ್ಥೆ ಸ್ಥಾಪನೆ
ಕೇಂದ್ರ ಆಯುಷ್ ಇಲಾಖೆ ರಾಜ್ಯ ಖಾತೆ ಸಚಿವ ಶ್ರೀಪಾದ್ ಯಸ್ಸೋ ನಾಯ್ಕ್
Published On :

ಬೆಂಗಳೂರು: ದೇಶದಲ್ಲಿ 6 ಕಡೆ ಯೋಗ ಸಂಶೋಧನಾ ಸಂಸ್ಥೆಗಳನ್ನು ಸ್ಥಾಪಿಸಲಾಗುತ್ತಿದ್ದು, ಅದರಲ್ಲಿ ಕರ್ನಾಟಕದಲ್ಲಿಯೂ ಒಂದು ಸಂಸ್ಥೆ ಸ್ಥಾಪಿಸಲಾಗುವುದು ಎಂದು ಕೇಂದ್ರ
ಆಯುಷ್ ಇಲಾಖೆ ರಾಜ್ಯ ಖಾತೆ ಸಚಿವ ಶ್ರೀಪಾದ್ ಯಸ್ಸೋ ನಾಯ್ಕ್ ಹೇಳಿದ್ದಾರೆ.

ಶ್ರೀ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ಸಂಸ್ಥೆ ಭಾನುವಾರ ಜಿಗಣಿಯ ಪ್ರಶಾಂತಿ ಕುಟೀರದಲ್ಲಿ ಏರ್ಪಡಿಸಿದ್ದ ಯೋಗ ಸಂಶೋಧನೆ ಮತ್ತು ಬಳಕೆ ಅವಕಾಶಗಳ ಕುರಿತ ಅಂತಾರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದರು. ಯೋಗ ಸಂಶೋಧನಾ ಸಂಸ್ಥೆ ಅಗತ್ಯತೆ ಬಗ್ಗೆ 3 ವರದಿಗಳನ್ನು ಸರ್ಕಾರ ಸ್ವೀಕರಿಸಿದೆ. ಅದನ್ನಾಧರಿಸಿ ಸರ್ಕಾರ 6 ಕಡೆ ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಿದೆ.

ಆದರಲ್ಲೂ ಯೋಗಕ್ಕೆ ಸಂಬಂಧಿಸಿದಂತೆ ಒಂದು ವಿಶ್ವವಿದ್ಯಾಲಯವನ್ನೇ ಸ್ಥಾಪಿಸಿ ದೇಶದಲ್ಲೇ ಮೊದಲು ಎಂಬ ಖ್ಯಾತಿಗೆ ಪಾತ್ರವಾಗಿರುವ ಕರ್ನಾಟಕದಲ್ಲಿ ಒಂದು ಕೇಂದ್ರವನ್ನು ಸ್ಥಾಪಿಸಲಾಗುತ್ತದೆ ಎಂದು ನಾಯ್ಕ್ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಬದಲಾದ ಜೀವನ ಶೈಲಿ ಮತ್ತು ಆರೋಗ್ಯ ನಿರ್ವಹಣೆ ದುಬಾರಿಯಾಗಿರುವ ಕಾರಣದಿಂದ ಜೀವನ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸುವುದು ಕಷ್ಟವಾಗುತ್ತಿದೆ. ಹೆಚ್ಚುತ್ತಿರುವ ಚಿಕಿತ್ಸಾ ವೆಚ್ಚ ಮತ್ತು ದುಬಾರಿ ಔಷಧಗಳು ಜನ ಸಾಮಾನ್ಯರಿಗೆ ಹೊರೆಯಾಗುತ್ತಿವೆ. ಇದರಿಂದ ಸಾಮಾನ್ಯ ಜನರು ಕಷ್ಟಕ್ಕೆ ಸಿಲುಕುತ್ತಿದ್ದಾರೆ. ಆದ್ದರಿಂದ ಈ ಸಮ್ಮೇಳನದಲ್ಲಿ ಪ್ರತಿನಿಧಿಗಳು ಚಿಕಿತ್ಸಾ ವೆಚ್ಚ ಕಡಿಮೆಯಾಗುವಂತಹ ಪರಿಹಾರ ಸೂತ್ರಗಳನ್ನು ರೂಪಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಆಧುನಿಕ ವೈದ್ಯ ಪದ್ಧತಿಯಿಂದ ರೋಗಗಳನ್ನು ಬಹುಬೇಗ ಪತ್ತೆ ಮಾಡಬಹುದು. ಅದೇ ರೀತಿ ಆಯುಷ್ ಪದ್ಧತಿಗಳಿಂದ ರೋಗ ಗುಣಪಡಿಸಿ ಆರೋಗ್ಯ ವೃದ್ಧಿಯಾಗುವಂತೆ ಮಾಡಬಹುದಾಗಿದೆ. ಆದ್ದರಿಂದ ಈ ಎರಡೂ ಪದ್ಧತಿಗಳನ್ನು ಸಮ್ಮಿಳಿತಗೊಳಿಸಿಬೇಕಿದೆ ಎಂದು ಸಿದ್ದರಾಮಯ್ಯ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.