

ಬೆಂಗಳೂರು: ಡಿಪ್ಲೊಮಾ ಸೆಮಿಸ್ಟಿರ್ ಥಿಯರಿ ಪರೀಕ್ಷೆ ಮೌಲ್ಯಮಾಪನ ಕಾರ್ಯ ಆರಂಭವಾಗಿದ್ದು, ಹಲವು ಉಪನ್ಯಾಸಕರು ಗೈರು ಹಾಜರಾಗಿದ್ದಾರೆ.
ಉಪನ್ಯಾಸಕರ ಗೈರನ್ನು ಗಂಭೀರವಾಗಿ ಪರಿಗಣಿಸಿರುವ ತಾಂತ್ರಿಕ ಶಿಕ್ಷಣ ಇಲಾಖೆಯು, ಯಾವ ಸಂಸ್ಥೆಗಳು ಉಪನ್ಯಾಸಕರನ್ನು ಮೌಲ್ಯಮಾಪನಕ್ಕೆ ಕಳುಹಿಸುವುದಿಲ್ಲವೋ ಆ ಸಂಸ್ಥೆಯ ಫಲಿತಾಂಶವನ್ನೇ ತಡೆಹಿಡಿಯುವುದಾಗಿ ಎಚ್ಚರಿಸಿದೆ.
ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯಕ್ಕೆ ಕೆಲ ಸಂಸ್ಥೆಗಳ ಪ್ರಾಂಶುಪಾಲರು ಉಪನ್ಯಾಸಕರನ್ನು ಬಿಡುಗಡೆಗೊಳಿಸಿಲ್ಲ., ಇದರಿಂದ ವಿದ್ಯಾರ್ಥಿಗಳಿಗೂ, ಶೈಕ್ಷಣಿಕ ವ್ಯವಸ್ಥೆ ಮೇಲೂ ಪರಿಣಾಮ ಬೀರುತ್ತದೆ. ಆದ್ದರಿಂದ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜನೆಗೊಂಡ ಎಲ್ಲಾ ಉಪನ್ಯಾಸಕರ ನ್ನು ತಕ್ಷಣವೇ ಬಿಡುಗಡೆ ಗೊಳಿಸುವಂತೆ ಇಲಾಖೆ ಎಲ್ಲಾ ಪಾಲಿಟೆಕ್ನಿಕ್ ಗಳ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ.
Advertisement