ಜೋಶಿ, ಶೆಟ್ಟರ್ ನಕಲಿ ಬಿಜೆಪಿಗಳು: ಯತ್ನಾಳ್

ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‍ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲವು ಸಾಧಿಸಿರುವ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ನಾಯಕ ವಿರುದ್ಧ ಕಟುಶಬ್ಧಗಳಲ್ಲಿ ಹರಿಹಾಯ್ದಿದ್ದಾರೆ...
ಬಸನಗೌಡ ಪಾಟೀಲ್ ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್
Updated on: 

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‍ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲವು ಸಾಧಿಸಿರುವ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ನಾಯಕ ವಿರುದ್ಧ ಕಟುಶಬ್ಧಗಳಲ್ಲಿ ಹರಿಹಾಯ್ದಿದ್ದಾರೆ.

ಯಡಿಯೂರಪ್ಪನವರಿಗೆ ರಾಜ್ಯಾಧ್ಯಕ್ಷ ಸ್ಥಾನ ಕಲ್ಪಿಸುವುದು ಮತ್ತು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ತೀರ್ಮಾನಕೈಗೊಂಡರೆ ಬಿಜೆಪಿಗೆ ಸೇರ್ಪಡೆ ಮಾಡುವ ಬಗ್ಗೆ ಯೋಚಿಸುತ್ತೇನೆ ಎಂದು ಹೇಳಿರುವ ಅವರು, ಶೆಟ್ಟರ್ ಮತ್ತು ಜೋಶಿಯವರು ಉತ್ತರ ಕರ್ನಾಟಕದಲ್ಲಿ ನಕಲಿ ಬಿಜೆಪಿಗಳು ಎಂದು ಟೀಕಿಸಿದ್ದಾರೆ.

ನೂತನ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ನಾನು ಪಕ್ಷ ಕಟ್ಟಿ ಬೆಳೆಸಿದ್ದೇನೆ, ನನ್ನ ಗೆಲುವಿನಲ್ಲಿ ನೈಜ ಬಿಜೆಪಿಗರ ಶ್ರಮವಿದೆ. ನೈಜ ಬಿಜೆಪಿಗರು ನನ್ನೊಂದಿಗೇ ಇದ್ದಾರೆ ಎಂಬುದಕ್ಕೆ ಈ ಫಲಿತಾಂಶವೇ ಸಾಕ್ಷಿ ಎಂದರು. ಸದ್ಯಕ್ಕೆ ಬಿಜೆಪಿಗೆ ಸೇರ್ಪಡೆ ಆಗುವ ಬಗ್ಗೆ ಯಾವುದೇ ಆಲೋಚನೆ ಮಾಡಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com