ಜಿಲ್ಲಾ ಸುದ್ದಿ

ಗ್ಯಾಸ್ ರೀಫಿಲ್ಲಿಂಗ್ ಆರೋಪಿ ಸೆರೆ

ಗ್ಯಾಸ್ ರೀಫಿಲ್ಲಿಂಗ್ ಆರೋಪಿ ಸೆರೆ
(ಸಾಂದರ್ಭಿಕ ಚಿತ್ರ)
Published On :

ಬೆಂಗಳೂರು: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಸಂಗ್ರಹಿಸಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ರಾಜರಾಜೇಶ್ವರಿನಗರ ಠಾಣೆ ಪೊಲೀಸರು ರು.1.32 ಲಕ್ಷ ಮೌಲ್ಯದ ವಿವಿಧ ಕಂಪನಿಗಳ 91 ಗ್ಯಾಸ್ ಸಿಲಿಂಡರ್ ವಶಪಡಿಸಿಕೊಂಡಿದ್ದಾರೆ.

ವಾಲ್ಮೀಕಿನಗರ ನಿವಾಸಿ ಶ್ರೀನಿವಾಸ (25) ಬಂಧಿತ ಆರೋಪಿ, ಚನ್ನಸಂದ್ರ ದ್ವಾರಕನಗರದ ಮನೆಯೊಂದರಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಸಂಗ್ರಹಿಸಿದ್ದು, ಗೃಹೋಪಯೋಗಿ ಗ್ಯಾಸ್ ಸಿಲಿಂಡರ್‍ಗಳಿಂದ ವಾಣಿಜ್ಯ ಬಳಕೆಯ ಸಿಲಿಂಡರ್ ಗಳಿಗೆ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿರುವ ಬಗ್ಗೆ ದೊರೆತ ಮಾಹಿತಿ ಮೇರೆಗೆ ಜ.6ರಂದು ಪೊಲೀಸರು ದಾಳಿ ನಡೆಸಿದ್ದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ರಾಜರಾಜೇಶ್ವರಿನಗರ ಠಾಣೆ ಪೊಲೀಸರು ಪ್ರಕರಣದ ಪ್ರಮುಖ ಆರೋಪಿ ಧನಂಜಯನ ಬಂಧನಕ್ಕೆ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.