ನೈರ್ಮಲ್ಯದಿಂದಾಗಿ ಸಾಂಕ್ರಾಮಿಕ ರೋಗ

ನಗರ, ಗ್ರಾಮೀಣ ಪ್ರದೇಶಗಳಲ್ಲಿ ನೀರು ಮತ್ತು ಒಳಚರಂಡಿ ವ್ಯವಸ್ಥೆ ಸುಸ್ಥಿರವಾಗಿರದಿದ್ದರೆ ಸಾಂಕ್ರಾಮಿಕ ರೋಗಗಳು ಹರಡುತ್ತವೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು...
ಮಳಿಗೆಗಳಲ್ಲಿದ್ದ ಸಿಟೆಂಕ್ಸ್ ಟ್ಯಾಂಕ್ ವೀಕ್ಷಿಸುತ್ತಿರುವ ಸಚಿವ ಯು.ಟಿ.ಖಾದರ್
ಮಳಿಗೆಗಳಲ್ಲಿದ್ದ ಸಿಟೆಂಕ್ಸ್ ಟ್ಯಾಂಕ್ ವೀಕ್ಷಿಸುತ್ತಿರುವ ಸಚಿವ ಯು.ಟಿ.ಖಾದರ್

ಬೆಂಗಳೂರು: ನಗರ, ಗ್ರಾಮೀಣ ಪ್ರದೇಶಗಳಲ್ಲಿ ನೀರು ಮತ್ತು ಒಳಚರಂಡಿ ವ್ಯವಸ್ಥೆ ಸುಸ್ಥಿರವಾಗಿರದಿದ್ದರೆ ಸಾಂಕ್ರಾಮಿಕ ರೋಗಗಳು ಹರಡುತ್ತವೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು.

ಇನೋವಾ ಸಂಸ್ಥೆ ಆಯೋಜಿಸಿದ್ದ ಸುಸ್ಥಿರ ನೀರು ಮತ್ತು ಒಳಚರಂಡಿ ವಿಷಯ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮಾತನಾಡಿದರು. ಮಲೇರಿಯಾ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳಿಗೆ ನೀರಿನ ಸಮಸ್ಯೆಯೇ ಮೂಲ. ಈ ರೋಗಗಳನ್ನು ತಡೆಯಲು ಎಚ್ಚರಿಕೆ ಹಾಗೂ ಮುಂಜಾಗರೂಕತೆ ವಹಿಸಬೇಕು. ಮೂಲಸೌಕರ್ಯ ಮತ್ತು ಒಳಚರಂಡಿ ಸಮಸ್ಯೆಯಿಂದಾಗಿ ಎದುರಾಗುವ ಸಮಸ್ಯೆಗಳ ನಿವಾರಣೆಗೆ ಹೆಚ್ಚಿನ ಒತ್ತು ನೀಡು ಅಗತ್ಯವಿದೆ. ಈ ನಿಟ್ಟಿನಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಹಾಗೂ ಇಲಾಖಾ ಅಧಿಕಾರಿಗಳು ಒಟ್ಟುಗೂಡಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಈ ರೀತಿಯ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲೇ ಮೂಲಸೌಕರ್ಯಕ್ಕೆ ಆದ್ಯತೆ ನೀಡುವ ಮೂಲಕ ಬಗೆಹರಿಸಬೇಕು. ಇಂತಹ ಸಮಸ್ಯೆಗಳ ಪರಿಹಾರಕ್ಕೆ ಉದ್ಯಮಿಗಳು ಹಾಗೂ ಖಾಸಗಿ ಕಂಪನಿಗಳು ತೋರುತ್ತಿರುವ ಕಾಳಜಿ ಒಳ್ಳೆಯ ಬೆಳವಣಿಗೆ, ಅಲ್ಲದೆ, ರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದರು.

ಸುಸ್ಥಿರ ನೀರು ಮತ್ತು ಒಳಚರಂಡಿಗೆ ಸಂಬಂಧಿಸಿ ಸರ್ಕಾರ ಹಲವು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಆದರೆ, ಸಂಪೂಣರ್ ವಾಗಿ ಇದನ್ನು ಬಗೆಹರಿಸಲು ಸಾಧ್ಯವಾಗುತ್ತಿ ಲ್ಲ. ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಸಾರ್ವಜನಿಕರ ಸಹಕಾರವೂ ಅಗತ್ಯವಿದೆ ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ವಿವಿಧ ಸಿಂಟೆಕ್ಸ್ ತಯಾರಿಕಾ ಕಂಪನಿಗಳ ಸಿಇಓಗಳು ಹಾಗೂ ಮಾಲೀಕರು ಇದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com