ಬೈಕ್ ಡಿಕ್ಕಿ ಪಾದಚಾರಿ ಸಾವು
ಬೆಂಗಳೂರು; ಗಾರೆಬಾವಿಪಾಳ್ಯ ರಸ್ತೆಯಲ್ಲಿ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಗುರುವಾರ ರಾತ್ರಿ
ಮಡಿವಾಳ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಓಡಿಶಾ ಮೂಲದ ಧ್ರುವಚರಣ್‍ದಾಸ್ (71) ಮೃತ ದುರ್ದೈವಿ. ಕೇಂದ್ರ ಸರ್ಕಾರದ ನಿವೃತ್ತ ಉದ್ಯೋಗಿಯಾದ ಇವರು ಮೂರು ತಿಂಗಳಿಂದ ಗಾರೆಬಾವಿಪಾಳ್ಯದ ಮಗನ ಮನೆಯಲ್ಲಿ ನೆಲೆಸಿದ್ದರು. ಕಾಯಿಲೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಮೃತರು ರಾತ್ರಿ 8ಗಂಟೆ ಸುಮಾರಿಗೆ ಮನೆ ಸಮೀಪದ ಮೆಡಿಕಲ್ ಶಾಪ್ ಗೆ ಔಷಧಿ ತರಲು ರಸ್ತೆ ದಾಟುತ್ತಿದ್ದಾಗ ಬೊಮ್ಮನಹಳ್ಳಿ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಬರುತ್ತಿದ್ದ ಬೈಕ್ ಸವಾರನೊಬ್ಬ ದಾಸ್‍ಗೆ ಡಿಕ್ಕಿ ಹೊಡೆದಿದ್ದಾರೆ.
ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ದಾಸ್‍ರನ್ನು ಸ್ಥಳಿಯರು ಸಮೀಪದ ಆಸ್ಪತ್ರಗೆ ದಾಖಲಿಸಿದರಾದೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಎಂದು ಪೊಲೀಸರು
ತಿಳಿಸಿದರು. ಸಣ್ಣಪುಟ್ಟ ಗಾಯಗಳೊಂದಿಗೆ ಬೈಕ್ ಚಾಲಕ ಉಮೇಶ್(29) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಬೈಕ್ ಅನ್ನು ವಶಕ್ಕೆ ಪಡೆದಿರುವ ಮಡಿವಾಳ ಸಂಚಾರ ಠಾಣೆ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ