

ಬೆಂಗಳೂರು: ಎಲ್ ಕೆಜಿ, ಯುಕೆಜಿ ವಿದ್ಯಾರ್ಥಿಗಳಿಗೆ ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆಯಡಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರವೇಶ ಕಲ್ಪಿಸದಂತೆ ಹೈ ಕೋರ್ಟ್ ನೀಡಿದ್ದ ತೆರವು ಕೋರಿ ಸರ್ಕಾರ ಮಧ್ಯಂತರ ಅರ್ಜಿ ಸಲ್ಲಿಸಿದೆ.
ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ ಪೂರ್ವ ಪ್ರಾಥಮಿಕ ಶಾಲೆಗೆ ನೇಮಕಾತಿ ಮಾಡಿಕೊಳ್ಳುವುದಕ್ಕೆ ಅವಕಾಶವಿದೆ. ಆದರೆ, ಅರ್ಜಿದಾರರು. ಕಾಯಿದೆಯಲ್ಲಿನ ಕೆಲ ಅಂಶಗಳನ್ನು ಮರೆ ಮಾಚಿ ಹೈ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಸರ್ಕಾರ ತಿಳಿಸಿದೆ.
ಪ್ರಾಥಮಿಕ ತರಗತಿಗಳಿಗೆ ನೋಂದಣಿ ಮಾಡಿಕೊಳ್ಳುವುದಕ್ಕೆ ಅವಕಾಶ ಕಲ್ಪಿಸಲಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಖಾಸಗಿ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ವ್ಯಾಪ್ತಿಗೆ ಬರುವ ಸುಮಾರು 1500 ಶಾಲೆಗಳು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ 2011, ಪ್ರಾಥಮಿಕ ಶಿಕ್ಷಣ ಹಕ್ಕು ಕಾಯಿದೆ -1870 ಸಂವಿಧಾನ ಪರಿಚ್ಚೇದ 21(ಎ) ಪ್ರಕಾರ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಅವಕಾಶವಿಲ್ಲ. ಆದರೂ ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಒತ್ತಡ ಹೇರುತ್ತದೆ ಎಂದು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಆರ್ ಟಿ ಇ ಕಾಯಿದೆಯನ್ವಯ ಎಲ್ ಕೆಜಿ ಮತ್ತು ಯುಕೆಜಿ ನೊಂದಣಿ ತಡೆ ನೀಡಿತ್ತು.