ರಕ್ತಸಿಕ್ತವಾಯಿತು ಸಿಲಿಕಾನ್ ಸಿಟಿ

ಬೆಂಗಳೂರು: ತಣ್ಣಗಿದ್ದ ರಾಜಧಾನಿ ಬೆಂಗಳೂರಿನಲ್ಲಿ ವಿವಿಧೆಡೆ ನಾಲ್ಕು ಕೊಲೆಗಳು ನಡೆದಿದ್ದು, ವಾರಾಂತ್ಯ ಸವಿಯುವ ನಗರ ಜನತೆಯಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.
ಅಕ್ಕನ ಮೊಮ್ಮಗಳ ಹುಟ್ಟುಹಬ್ಬದ ಪಾರ್ಟಿ ಮುಗಿಸಿಕೊಂಡು ಮನೆಗೆ ವಾಪಸಾಗುತ್ತಿದ್ದ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿರುವ ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಶನಿವಾರ ಬೆಳಗ್ಗೆ ಚಂದ್ರಾಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಾಯಂಡಹಳ್ಳಿಯ ವಿನಾಯಕ ಲೇಔಟ್ ನಿವಾಸಿ ಶಿವಮಾದು (40) ಕೊಲೆಯಾದವರು. ಮೂಲತಃ ಚನ್ನಪಟ್ಟಣದ ದಶವಾರದವರಾದ ಇವರು ಕಳೆದ ಹಲವು ವರ್ಷಗಳಿಂದ ಪತ್ನಿ ಪವಿತ್ರಾ ಹಾಗೂ ಇಬ್ಬರು ಮಕ್ಕಳೊಂದಿಗೆ ನಗರದಲ್ಲಿ ನೆಲೆಸಿದ್ದರು. ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿರುವ ಸೈಕಲï ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ರಾತ್ರಿ ಅಕ್ಕನ ಮೊಮ್ಮಗಳ ಹುಟ್ಟುಹಬ್ಬದ ಪಾರ್ಟಿ ಮುಗಿಸಿಕೊಂಡು ಮನೆಯತ್ತ ನಡೆದುಕೊಂಡು ಹೋಗುವಾಗ ನಾಯಂಡಹಳ್ಳಿ ಗಣೇಶ ದೇವಾಲಯದ ಬಳಿ ಅಡ್ಡಗಟ್ಟಿದ ದುಷ್ಕರ್ಮಿಗಳು ಕುತ್ತಿಗೆಗೆ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು.
ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಶಿವಮಾದು ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಬೆಳಗ್ಗೆ 5ರವರೆಗೂ ಘಟನೆ ಯಾರ ಗಮನಕ್ಕೂ ಬಂದಿರಲಿಲ್ಲ. ವಾಯುವಿಹಾರಕ್ಕೆ ತೆರಳಿದ್ದ ಕೆಲ ಸ್ಥಳೀಯರು ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯ ಶವ ಕಂಡು ಪೊಲೀಸರಿಗೆ ವಿಷಯ ಮುಟ್ಟಿಸಿದ್ದರು. ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮೃತ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು. ಈ ಸಂಬಂಧ ಚಂದ್ರಾಲೇಔಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಲೇವಾದೇವಿಗಾರನ ಕೊಲೆ: ಕಾರಿನಲ್ಲಿ ತೆರಳುತ್ತಿದ್ದ ಲೇವಾದೇವಿಗಾರನನ್ನು ಅಡ್ಡಗಟ್ಟಿರುವ ದುಷ್ಕರ್ಮಿಗಳ ಗುಂಪೊಂದು ಮಾರಕಾಸuಉಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ
ಸುಬ್ರಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಜೆ.ಪಿ.ನಗರ 7ನೇ ಹಂತ ರಾಘವನಗರದ ನಿವಾಸಿ ಸಂದೀಪ್ರೆಡ್ಡಿ (27) ಹತ್ಯೆಯಾದವರು. ಕಳೆದ ಹಲವು ವರ್ಷಗಳಿಂದ ಲೇವಾದೇವಿ ವ್ಯವಹಾರ ನಡೆಸುತ್ತಿದ್ದ ಇವರು, ರಾತ್ರಿ 11ರ ಸುಮಾರಿಗೆ ಪುಟ್ಟೇನಹಳ್ಳಿ ಮುಖ್ಯರಸ್ತೆ ಆರ್ಬಿಐ ಲೇಔಟ್ಗೆ ತಮ್ಮ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ
ಕಾರಿನಲ್ಲಿ ಬಂದಿರುವ ದುಷ್ಕರ್ಮಿಗಳ ಗುಂಪೊಂದು ಸಂದೀಪ್ ಕಾರಿಗೆ ಡಿಕ್ಕಿ ಹೊಡೆದಿದೆ.
ಇದರಿಂದ ಸಂದೀಪ್ ತಮ್ಮ ಕಾರು ನಿಲ್ಲಿಸಿ ಹೊರ ಬಂದಿದ್ದಾರೆ. ತಕ್ಷಣ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಂದೀಪ್ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಹಣಕಾಸು ವ್ಯವಹಾರದ ವಿಚಾರವಾಗಿ ಸಂದೀಪ್ ಮತ್ತು ನಾಗರಾಜು ಎಂಬುವವರ ನಡುವೆ ವೈಮನಸು ಉಂಟಾಗಿತ್ತು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ನಾಗರಾಜು ಮತ್ತು ಆತನ ಸಹಚರರು ಈ ಕೃತ್ಯಎಸಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಇವರು ನಾಪತ್ತೆಯಾಗಿರುವುದರಿಂದ ಪೊಲೀಸರ ಅನುಮಾನ ಮತ್ತಷ್ಟು ಬಲಗೊಂಡಿದೆ. ಈ ಸಂಬಂಧ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆ ಅನುಮಾನಸ್ಪದ ಸಾವು: ಗೃಹಿಣಿಯೊಬ್ಬರು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ಇಂದಿರಾನಗರದಲ್ಲಿ ಶನಿವಾರ ನಡೆದಿದೆ. ಕೊಳ್ಳೇಗಾಲ ಮೂಲದ ಹರಿಣಿ (23) ಮೃತಪಟ್ಟಿರುವವರು.
ಬೆಂಗಳೂರಿನ ವಾಸಿ ರಿಲಾಯನ್ಸ್ ಕಂಪನಿ ಉದ್ಯೋಗಿ ಮಂಜುನಾಥ್ನನ್ನು ಹರಿಣಿ ಮದುವೆಯಾಗಿದ್ದರು. ಪತಿ ಮಂಜುನಾಥ್ ಕೆಲಸಕ್ಕೆ ಹೋಗಿದ್ದಾಗ ಘಟನೆ ನಡೆದಿದ್ದು, ಹರಿಣಿ ತಂದೆ ರಾಮಚಂದ್ರ ಅವರಿಂದ ಬೆಳಕಿಗೆ ಬಂದಿದೆ. ಮಗಳನ್ನು ನೋಡಲು ತಂದೆ ರಾಮಚಂದ್ರ ಮನೆಗೆ ಬಂದಿದ್ದಾಗ ಬಹಳ ಹೊತ್ತು ಮಗಳು ಬಾಗಿಲು ತೆರೆಯಲಿಲ್ಲ. ಆಗ ಗಾಬರಿಗೊಂಡ ರಾಮಚಂದ್ರ, ಕಿಟಕಿಯಿಂದ ಜೋರಾಗಿ ಕೂಗಿದ್ದಾರೆ. ಆಗಲೂ ಬಾಗಿಲು ತೆಗೆಯದನ್ನು ಕಂಡು ಗಲಿಬಿಲಿಗೊಂಡ ರಾಮಚಂದ್ರ ಬಾಗಿಲ ಒಡೆದು ಒಳಗೆ ಹೋಗಿದ್ದಾರೆ. ತP್ಷÀಣ ಹರಿಣಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಹರಿಣಿ ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆಬಳಿಕ ಶವವನ್ನು ಕೊಳ್ಳೇಗಾಲಕ್ಕೆ ಕೊಂಡೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್ ತಿಳಿಸಿದರು.
ಅರೆಬೆಂದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ
ಕೆ.ಜಿ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಅರಬೆಂದ ಸ್ಥಿತಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದೆ. ನಾಗವಾರದ ವೀರನಪಾಳ್ಯದ ಬಿಎನ್ ಕಾಪೆರ್Çೀರೇಟ್ ಕಚೇರಿ ಪಕ್ಕದಲ್ಲಿ
ಯುವಕನ ಶವ ಪತ್ತೆಯಾಗಿದ್ದು, ಮೃತ ಯುವಕನ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಯುವಕನ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲಾಗಿದ್ದು, ಯಾರು ಯಾವ
ಉದ್ದೇಶಕ್ಕೆ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿಲ್ಲ. ಶವವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


