ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಜ.20ರೊಳಗೆ ನಗರದಲ್ಲಿರುವ ಅನಧಿಕೃತ ಶಾಲೆಗಳನ್ನು ಮುಚ್ಚಬೇಕು ಎಂದು ಕರ್ನಾಟಕ ವಿದ್ಯಾರ್ಥಿಗಳ ಪೋಷಕರ ಜಾಗೃತಿ ವೇದಿಕೆ ಆಗ್ರಹಿಸಿದೆ.
ಶನಿವಾರ ನಗರದ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ವೇದಿಕೆಯ ಅಧ್ಯಕ್ಷ ಸುರೇಶ ಮಾತನಾಡಿ, ನಗರದಲ್ಲಿ ತಲೆ ಎತ್ತಿರುವ ಅನಧಿಕೃತ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ವೇದಿಕೆ ಆಯುಕ್ತರಿಗೆ ಕಳೆದ ಮೂರ್ನಾಲ್ಕು ತಿಂಗಳ ಹಿಂದೆಯೇ ಮನವಿ ಸಲ್ಲಿಸಿತ್ತು.
ಪರೀಕ್ಷೆಗಳು ಮುಗಿದ ನಂತರ (ಜ.20) ಅನಧಿಕೃತ ಶಾಲೆಗಳನ್ನು ಮುಚ್ಚಲಾಗುವುದು ಎಂದು ಈಗಾಗಲೇ ಅನಧಿಕೃತ ಶಾಲೆಗಳಿಗೆ ಇಲಾಖೆ ಸೂತ್ತೋಲೆ ಹೊರಡಿಸಿದೆ. ಆದರಂತೆ ಅಧಿಕಾರಿಗಳು ಅನಧಿಕೃತ ಶಾಲೆಗಳನ್ನು ಮುಚ್ಚಲು ಕ್ರಮಕೈಗೊಳ್ಳಬೇಕು. ಒಂದು ವೇಳೆ ಈ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲು ಹಿಂಜರಿದರೆ ವೇದಿಕೆಯೇ ಅನಧಿಕೃತ ಶಾಲೆಗಳಿಗೆ ಬೇಗ ಜಡಿಯಲಿದೆ ಎಂದು ಸುರೇಶ್ ಎಚ್ಚರಿಸಿದರು.
Advertisement