ಲೈಂಗಿಕ ಅಲ್ಪಸಂಖ್ಯಾತರಿಗೆ ಕಿರುಕುಳ: ಕಾಯ್ದೆ ರದ್ದಿಗೆ ಅರ್ಜಿ

ಲೈಂಗಿಕ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡುವ ಕರ್ನಾಟಕ ಪೊಲೀಸ್ ಕಾಯಿದೆ ಸೆಕ್ಷನ್ 36ಎ ಅನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ...
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಅಕ್ಕೈ ಪದ್ಮಸಾಲಿ (ಸಂಗ್ರಹ ಚಿತ್ರ)
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಅಕ್ಕೈ ಪದ್ಮಸಾಲಿ (ಸಂಗ್ರಹ ಚಿತ್ರ)

ಬೆಂಗಳೂರು: ಲೈಂಗಿಕ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡುವ ಕರ್ನಾಟಕ ಪೊಲೀಸ್ ಕಾಯಿದೆ ಸೆಕ್ಷನ್ 36ಎ ಅನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಅಕ್ಕೈ ಪದ್ಮಸಾಲಿ ಸೇರಿದಂತೆ ಇತರೆ 2 ಸಂಘಟನೆಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯನ್ಯಾಯಮೂರ್ತಿ ಎಸ್.ಕೆ. ಮುಖರ್ಜಿ ಮತ್ತು ನ್ಯಾ.ರವಿ ಮಳಿಮಠ ಅವರಿದ್ದ ನ್ಯಾಯಪೀಠ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದೆ.

ಕರ್ನಾಟಕ ಪೊಲೀಸ್ ಕಾಯಿದೆ 36ಎ ಪ್ರಕಾರ ಲೈಂಗಿಕ ಕಾರ್ಯಕರ್ತರು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಹೊಗಬೇಕಾದರೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಅನುಮತಿ ಪಡೆಯಬೇಕು. ಅವರು ನಡೆಸುವ ಲೈಂಗಿಕ ಕ್ರಿಯೆ ಪ್ರಕೃತಿಗೆ ವಿರುದ್ಧವಾಗಿದೆ. ಅಲ್ಲದೆ, ಸಣ್ಣ ಮಕ್ಕಳನ್ನು ಅಪಹರಣ ಮಾಡಿ ತಮ್ಮ ಸಮುದಾಯಕ್ಕೆ ಸೇರಿಸಿಕೊಳ್ಳುವ ಆರೋಪವಿದೆ. ರಾಜ್ಯ ಸರ್ಕಾರ ಲೈಂಗಿಕ ಅಲ್ಪಸಂಖ್ಯಾತರಾದ ತಮಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಬೆಂಬಲಿಸಿದರೆ, ಮತ್ತೊಂದು ಕಡೆ ಸಂಕಷ್ಟಕ್ಕೆ ತಳ್ಳುತ್ತಿದೆ. ಆದ್ದರಿಂದ ಕಾಯಿದೆ ರದ್ದು ಮಾಡಿ ಎಂದು ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com