ಒಗ್ಗಟ್ಟಾಗಿ ಕೆಲಸ ಮಾಡಿ: ಮೇಘರಿಕ್

ಪೊಲೀಸ್ ಪೇದೆಗಳು ಮತ್ತು ಅಧಿಕಾರಿಗಳು ತಂಡವಾಗಿ ಕೆಲಸ ಮಾಡಿದಾಗ ಮಾತ್ರ ಅಪರಾಧಗಳನ್ನು ನಿಯಂತ್ರಣಕ್ಕೆ ತರಬಹುದೆಂದು ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಅಭಿಪ್ರಾಯಪಟ್ಟರು...
ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ (ಸಂಗ್ರಹ ಚಿತ್ರ)
ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ (ಸಂಗ್ರಹ ಚಿತ್ರ)

ಬೆಂಗಳೂರು: ಪೊಲೀಸ್ ಪೇದೆಗಳು ಮತ್ತು ಅಧಿಕಾರಿಗಳು ತಂಡವಾಗಿ ಕೆಲಸ ಮಾಡಿದಾಗ ಮಾತ್ರ ಅಪರಾಧಗಳನ್ನು ನಿಯಂತ್ರಣಕ್ಕೆ ತರಬಹುದೆಂದು ನಗರ ಪೊಲೀಸ್ ಆಯುಕ್ತ ಎನ್.
ಎಸ್.ಮೇಘರಿಕ್ ಅಭಿಪ್ರಾಯಪಟ್ಟರು.

ಥಣಿಸಂದ್ರದ ಸಿಎಆರ್ ಉತ್ತರ ಮೈದಾನದಲ್ಲಿ ಶುಕ್ರವಾರ ನಡೆದ ಸರ್ವಿಸ್ ಪರೇಡ್‍ನಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ನಗರದಲ್ಲಿ ವಾಹನಗಳ ದಟ್ಟಣೆಗಿಂತ ಜನದಟ್ಟಣೆ ಹೆಚ್ಚಾಗಿದೆ. ಪ್ರತಿದಿನ ಲಕ್ಷಾಂತರ ಮಂದಿ ನಗರಕ್ಕೆ ಬಂದು ಹೋಗುತ್ತಾರೆ. ಹೀಗಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಜತೆಗೆ ಅಪರಾಧ ತಡೆಗಟ್ಟಲು
ನಾವೆಲ್ಲಾ ಒಗ್ಗಟ್ಟಿ ನಿಂದ ಕೆಲಸ ಮಾಡಬೇಕೆಂದು ಅವರು ಹೇಳಿದರು.

ಅಪರಾಧ ಪ್ರಕರಣಗಳಲ್ಲಿ ಆರೋಪಿಗಳನ್ನು ಸಾಧ್ಯವಾದಷ್ಟು ಬೇಗ ಬಂಧಿಸಲು ಶ್ರಮವಹಿಸಬೇಕು. ಇನ್ನು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹೆಚ್ಚು ಗಮನ ಹರಿಸುವ ಮೂಲಕ ಅಪಘಾತಗಳಿಗೆ ಕಡಿವಾಣ ಹಾಕಬೇಕು. ಪೊಲೀಸ್ ಪೇದೆಗಳಿಂದ ಹಿಡಿದು ಅಧಿಕಾರಿಗಳು ಯಾವುದೇ ಸಮಸ್ಯೆಗಳಿದ್ದರೂ ನನ್ನೊಂದಿಗೆ ಮುಕ್ತವಾಗಿ ಚರ್ಚಿಸಬಹುದು. ಇದಕ್ಕೆ ತಮ್ಮದೇನೂ ಅಭ್ಯಂತರವಿಲ್ಲ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com