ಕರ್ತವ್ಯಲೋಪ: ಪೊಲಿಸ್ ಅಧಿಕಾರಿಗಳಿಬ್ಬರ ಅಮಾನತು

ವರದಕ್ಷಿಣೆ ಕಿರುಕುಳ ಪ್ರಕರಣವೊಂದರ ತನಿಖೆಯಲ್ಲಿ ಕರ್ತವ್ಯಲೋಪ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಹೆಬ್ಬಾಳ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ನಾಗೇಶ್ ಮತ್ತು ಸಬ್ ಇನ್ಸ್ ಪೆಕ್ಟರ್ ವೇದಾವತಿ ಅಮಾನತುಗೊಂಡಿದ್ದಾರೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ವರದಕ್ಷಿಣೆ ಕಿರುಕುಳ ಪ್ರಕರಣವೊಂದರ ತನಿಖೆಯಲ್ಲಿ ಕರ್ತವ್ಯಲೋಪ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಹೆಬ್ಬಾಳ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ನಾಗೇಶ್ ಮತ್ತು  ಸಬ್ ಇನ್ಸ್ ಪೆಕ್ಟರ್ ವೇದಾವತಿ ಅಮಾನತುಗೊಂಡಿದ್ದಾರೆ.

ಈ ಇಬ್ಬರು ಅಧಿಕಾರಿಗಳು ಪ್ರಕರಣದ ತನಿಖೆಯಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದ್ದು, ಆರೋಪಿ ಪರ ನಿಂತಿದ್ದಾರೆ ಎಂದು ಆರೋಪಿಸಿ ನೊಂದ ಮಹಿಳೆ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಲಾಗಿತ್ತು. ಮಹಿಳೆ ದೂರು ನೀಡಿದಂತೆ, ಪೊಲೀಸ್ ಇನ್ಸ್ ಪೆಕ್ಟರ್ ನಾಗೇಶ್ ಮತ್ತು ಸಬ್ ಇನ್ಸ್ ಪೆಕ್ಟರ್ ವೇದಾವತಿ ಅವರುಗಳು ಪ್ರಕರಣದ ತನಿಖೆಯಲ್ಲಿ ಕರ್ತವ್ಯಲೋಪ ಎಸೆಗಿರುವುದು ಇಲಾಖಾ ತನಿಖೆಯಲ್ಲಿ ಸಾಬೀತಾಗಿತ್ತು.

ಆ ಹಿನ್ನೆಲೆಯಲ್ಲಿ ತಪ್ಪಿತಸ್ಥ ಇಬ್ಬರೂ ಅಧಿಕಾರಿಗಳನ್ನು ಅಮಾನತುಗೊಳಿಸಿ ಡಿಸಿಪಿ ಸುರೇಶ್ ಅವರು ಆದೇಶ ಹೊರಡಿಸಿದ್ದಾರೆ. ``ವರದಕ್ಷಿಣೆ ಕಿರುಕುಳದಂತಹ ಗಂಭೀರ ಪಕರಣದ ತನಿಖೆಯಲ್ಲಿ  ಜವಾಬ್ದಾರಿಯುತವಾಗಿ ತನಿಖೆ ನಡೆಸಬೇಕಿದ್ದ ಅಧಿಕಾರಿಗಳು, ಗಂಭೀರ ಲೋಪ ಎಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಅವರು ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದ್ದು, ಅಮಾನತು ಮಾಡಿ  ಆದೇಶಿಸಲಾಗಿದೆ'' ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಏನೇನಾಯ್ತು?
-ವರದಕ್ಷಿಣೆ ಪ್ರಕರಣ ವಿಚಾರಣೆ ಲೋಪ ಎಸಗಿದ್ದರು
-ನೊಂದ ಮಹಿಳೆಯಿಂದ ಉನ್ನತಾಧಿಕಾರಿಗಳಿಗೆ ದೂರು
-ಇಲಾಖೆ ತನಿಖೆಯಲ್ಲಿ ಅಧಿಕಾರಿಗಳ ವಿರುದ್ಧದ ಆರೋಪ ಸಾಬೀತು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com