ಬಿಐಎಎಲ್ ಆಸ್ತಿ ತೆರಿಗೆ: ಹೈ ತಡೆಯಾಜ್ಞೆ

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ (ಬಿಐಎಎಲ್) 20 ಕೋಟಿ ರೂ.ಆಸ್ತಿ ತೆರಿಗೆ ಪಾವತಿಸುವಂತೆ ಸೂಚಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಣ್ಣೇಶ್ವರ ಗ್ರಾಮ ಪಂಚಾಯ್ತಿಗೆ ನೀಡಿದ್ದ ನೋಟಿಸ್ ಗೆ ಹೈ ಕೋರ್ಟ್ ತಡೆಯಾಜ್ಞೆ ನೀಡಿದೆ...
(ಸಂಗ್ರಹ ಚಿತ್ರ)
(ಸಂಗ್ರಹ ಚಿತ್ರ)

ಬೆಂಗಳೂರು: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ (ಬಿಐಎಎಲ್) 20 ಕೋಟಿ  ರೂ.ಆಸ್ತಿ ತೆರಿಗೆ ಪಾವತಿಸುವಂತೆ ಸೂಚಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಣ್ಣೇಶ್ವರ ಗ್ರಾಮ ಪಂಚಾಯ್ತಿಗೆ ನೀಡಿದ್ದ ನೋಟಿಸ್ ಗೆ ಹೈ ಕೋರ್ಟ್ ತಡೆಯಾಜ್ಞೆ ನೀಡಿದೆ.

ಅಣ್ಣೇಶ್ವರ ಗ್ರಾಮ ಪಂಚಾಯ್ತಿಯ ನೋಟಿಸ್ ಪ್ರಶ್ನಿಸಿ ಬಿಐಎಎಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಎಸ್.ಅಬ್ದುಲ್ ನಜೀರ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದೆ. ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು ಜಿಲ್ಲಾ ಪಂಚಾಯ್ತಿ ಮತ್ತು ಅಣ್ಣೇಶ್ವರ ಗ್ರಾಮ ಪಂಚಾಯತ್ ಗೆ ಪೀಠ ಇದೇ ವೇಳೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂಡೂಡಿದೆ.

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ (ಬಿಐಎಎಲ್) 20 ಕೋಟಿ ರೂ. ಆಸ್ತಿ ತೆರಿಗೆ ಪಾವತಿಸುವಂತೆ ಸೂಚಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಣ್ಣೇಶ್ವರ ಗ್ರಾಮ ಪಂಚಾಯ್ತಿಯು 2013ರ ಸೆ.10ರಂದು ನೋಟಿಸ್ ನೀಡಿದ್ದು. 2010ರಿಂದ 2014ನೇ ಸಾಲಿನವರೆಗೂ ಆಸ್ತಿ ತೆರಿಗೆ ಪಾವತಿಸಬೇಕು ಎಂದು ನೋಟಿಸ್ ನಲ್ಲಿ ಸೂಚಿಸಲಾಗಿತ್ತು.

ಇದನ್ನು ಪ್ರಶ್ನಿಸಿ ಬಿಐಎಎಲ್ ಜಿಲ್ಲಾ ಪಂಚಾಯ್ತಿ ಮೊರೆ ಹೋಗಿತ್ತು. ಬಿಪಂ ಸಹ ಗ್ರಾಪಂ ತೆರಿಗೆ ಪಾವತಿಸಬೇಕು ಎಂದಿತ್ತು. ಇದನ್ನು ಪ್ರಶ್ನಿಸಿ ಬಿಐಎಎಲ್ ಹೈಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com