

ಬೆಂಗಳೂರು: ವ್ಯಕ್ತಿಯೊಬ್ಬರಿಗೆ ಮೂವರು ಅಪರಿಚಿತ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ರೆಸಿಡೆನ್ಸಿ ರಸ್ತೆಯಲ್ಲಿ ಸೋಮವಾರ ತಡ ರಾತ್ರಿ ನಡೆದಿದೆ.
ಕುಮಾರ್ ಹಲ್ಲೆಗೊಳಗಾದ ವ್ಯಕ್ತಿ. ವಸಂತನಗರದಲ್ಲಿ ಖಾಸಗಿ ಕಂಪನಿಯಲ್ಲಿ ಪ್ರೋಗ್ರಾಂ ಮ್ಯಾನೇ ಜರ್ ಆಗಿರುವ ಕುಮಾರ್ ಸೋಮವಾರ ರಾತ್ರಿ 10.30ರ ವೇಳೆಯಲ್ಲಿ ಆಫೀಸ್‍ನಿಂದ ಮನೆಗೆ ಬರುವಾಗ ಮೂವರು ಅಪರಿಚಿತರು ಬಂದು, ಲೋನ್ ಹಣ ವಾಪಸ್ ಮಾಡಿಲ್ಲ ಎಂದು ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಈ ವೇಳೆ ಕುಮಾರ್ ನಾನು ಯಾವುದೇ ಲೋನ್ ಪಡೆದಿಲ್ಲ ಎಂದು ಕೇಳಿಕೊಂಡರು ಬಿಡದ ಆರೋಪಿಗಳು ಹಲ್ಲೆ ಮಾಡಿ, ಪರಾರಿ ಆಗಿದ್ದಾರೆ ಎಂದು ಹೇಳಿದ್ದಾರೆ.
ಪ್ರಸ್ತುತ ಕಾಮಾಕ್ಷಿಪಾಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ.