ಇನ್ನೆರಡು ದಿನಗಳಲ್ಲಿ ಲೋಕಾಯುಕ್ತ ನೇಮಕ: ಸಿಎಂ

Published On :
ಬೆಂಗಳೂರು: ಇನ್ನೆರಡು ದಿನಗಳಲ್ಲಿ ಲೋಕಾಯುಕ್ತ ಹುದ್ದೆಗೆ ಹೊಸಬರನ್ನು ನೇಮಿಸ-ಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಾಯುಕ್ತ ಹುದ್ದೆಗೆ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ. ಅದನ್ನು ಸದ್ಯದಲ್ಲೇ ಅಂತಿಮಗೊಳಿಸಿ ರಾಜ್ಯಪಾಲರಿಗೆ ಕಳುಹಿಸಲಾಗುವುದು ಎಂದರು.
ಇದೇ ವೇಳೆ ಉಪ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಚುನಾವಣೆಗಳನ್ನು ಎದುರಿಸಲು ಸದಾ ಸಿದ್ಧವಾಗಿರುತ್ತದೆಯೇ ವಿನಃ ಎಂದಿಗೂ ಹಿಂದೇಟು ಹಾಕುವ ಪಕ್ಷವಲ್ಲ. ಜಿಪಂ ಮತ್ತು ತಾಪಂ ಚುನಾ ವಣೆಗಳಿಗೆ ಕಾಂಗ್ರೆಸ್ ಹಿಂದೇಟು ಹಾಕುತ್ತಿದೆ ಎಂದು ಬಿಜೆಪಿ ಹೇಳುತ್ತಿದೆ. ಇದು ಖಂಡಿತ ತಪ್ಪು. ಚುನಾವಣೆಗಳು ಯಾವಾಗ ಬರುತ್ತವೆ ಎಂದು ನಾವು ಕಾಯುತ್ತಿರುತ್ತೇವೆ, ಚುನಾವಣೆಗೆ ಕಾಂಗ್ರೆಸ್ ಪಕ್ಷ ಸದಾ ಸಿದ್ಧವಿರುತ್ತದೆ ಎಂದರು.
ಕಾಂಗ್ರೆಸ್ನಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚು. ಅದೇ ಬೇರೆ ಪಕ್ಷಗಳಲ್ಲಿ ಆಕಾಂಕ್ಷಿಗಳು ಅಷ್ಟಾಗಿ ಇರುವುದಿಲ್ಲ. ಆದ್ದರಿಂದ ನಮ್ಮಲ್ಲಿ ಅಭ್ಯರ್ಥಿಗಳ ಆಯ್ಕೆ ಕೊಂಚ ಕಷ್ಟ. ಸದ್ಯದಲ್ಲೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಒಟ್ಟಾರೆ ಜ.20 ಒಳಗಾಗಿ ಎಲ್ಲಾ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ವಿವರಿಸಿದರು. ತಾಪಂ, ಜಿಪಂ ಚುನಾವಣೆಗಳಿಂದ ಒತ್ತಡವೇನೂ ಇಲ್ಲ. ಆದ್ದರಿಂದ ಮೊದಲು ಉಪ ಚುನಾವಣೆಗೆ ಸಿದ್ಧವಾಗುತ್ತೇವೆ. ನಂತರ ತಾಪಂ, ಜಿಪಂ ಚುನಾವಣೆಗಳಿಗೆ ತಯಾರಾಗುತ್ತೇವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


