ತುಮಕೂರು: ರಸ್ತೆ ದಾಟುತ್ತಿದ್ದ ಪಾಡಚಾರಿಗಳ ಮೇಲೆ ಟವೇರಾ ಕಾರು ಹರಿದು ನಾಲ್ವರು ಪಾದಚಾರಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಶಿರಾ ಬಳಿಯ ದೊಡ್ಡಾಲದಮರ ಗ್ರಾಮದಲ್ಲಿ ನಡೆದಿದೆ.
ಮೂವರು ಮಹಿಳೆಯರು ಹಾಗೂ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ನಂತರ ಚಾಲಕ ಕಾರಿನೊಡನೆ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಶಿರಾ ತಾಲೂಕಿನ ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement