ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಬಯಸಿದ್ದ ಪರಮೇಶ್ವರ್‍ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಮಗಳೂರು ಉಸ್ತುವಾರಿ ವಹಿಸಿಕೊಳ್ಳಲು ಸೂಚಿಸಿದ್ದರು. ಈ ಬಗ್ಗೆ ಮಾಧ್ಯಮಗಳು ಪ್ರತಿಕ್ರಿಯೆ ಕೇಳಿದಾಗ ಪರಮೇ-ಶ್ವರ್ ಅಗತ್ಯ ಮತ್ತು ಅನಿವಾರ್ಯವಾದರೆ ಮಾತ್ರ ಚಿಕ್ಕಮಗಳೂರು ಉಸ್ತುವಾರಿ ವಹಿಸಿಕೊಳ್ಳುತ್ತೇನೆ ಎಂದು ಹೇಳಿದ್ದರು. ಆದರೂ ಇದನ್ನು ಸಮರ್ಥಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಅಭಯಚಂದ್ರ ಜೈನ್‍ಗೆ ಉಸ್ತುವಾರಿ ಬೇಡವಾಗಿದೆ ಆದ್ದರಿಂದ ಪರಮೇಶ್ವರ್‍ಗೆ ಕೊಡುತ್ತಿದ್ದೇವೆ ಎಂದು ಹೇಳಿದ್ದರು.