ಜಿಲ್ಲಾ ಸುದ್ದಿ

ನಕಲಿ ಶರ್ಟ್ ಮಾರುತ್ತಿದ್ದವನ ಬಂಧನ

ನಕಲಿ ಶರ್ಟ್ ಮಾರುತ್ತಿದ್ದವನ ಬಂಧನ
(ಸಾಂದರ್ಭಿಕ ಚಿತ್ರ)
Published On :

ಬೆಂಗಳೂರು: ಪ್ರಸಿದ್ಧ ಬಟ್ಟೆ ಕಂಪನಿಗಳ ಹೆಸರುಗಳನ್ನು ಬಳಸಿ ನಕಲಿ ಶರ್ಟ್ ಗಳನ್ನು ತಯಾರು ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಚಂದ್ರಲೇಔಟ್ ಠಾಣಾ ವ್ಯಾಪ್ತಿಯ ನಾಯಂಡಹಳ್ಳಿ ನಿವಾಸಿ ರವಿ (38) ಬಂಧಿತ ಆರೋಪಿ. ಈತ ಸೂರ್ಯಸಾಯಿ ಕ್ರಿಯೇಷನ್ಸ್ ಎಂಬ ಅಂಗಡಿಯನ್ನು ಇಟ್ಟುಕೊಂಡು ಯುಎಸ್, ಪೋಲೋ ಹಾಗೂ ಎಲ್‍ಪಿ ಎಂಬ ಪ್ರಸಿದ್ಧ ಕಂಪನಿಗಳ ಶರ್ಟ್‍ಗಳನ್ನು ಸುಮಾರು ಒಂದು ವರ್ಷಗಳಿಂದ ನಕಲಿ ಮಾಡಿ ಮಾರಾಟ ಮಾಡುತ್ತಿದ್ದ. ಈ ರೀತಿ ಗ್ರಾಹಕರು ಹಾಗೂ ತಯಾರಿಕಾ ಕಂಪನಿಗೆ ವಂಚನೆ ಮಾಡುತ್ತಿದ್ದಾನೆ ಎಂದು ದೂರು ಬಂದ ಹಿನ್ನೆಲೆಯಲ್ಲಿ, ಖಚಿತ ಮಾಹಿತಿ ಪಡೆದ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತನಿಂದ 10 ಲಕ್ಷ ರೂಪಾಯಿ ಮೌಲ್ಯದ ಸುಮಾರು 564 ಶರ್ಟ್‍ಗಳು ಹಾಗೂ ಕಚ್ಛಾ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ವಿಚಾರಣೆ ನಡೆಸಿದಾಗ ಹೆಚ್ಚು ಹಣ ಸಂಪಾದಿಸಲು ಈ ಕೃತ್ಯ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.