

ಬೆಂಗಳೂರು: ರಾಜ್ಯ ಸರ್ಕಾರವು ಸ್ವಾಮಿ ವಿವೇಕಾನಂದರ 153ನೇ ಜಯಂತಿ ಅಂಗವಾಗಿ ಹಮ್ಮಿಕೊಂಡಿರುವ ರಾಷ್ಟ್ರೀಯ ಯುವ ಸಪ್ತಾಹದ ಸಮಾರೋಪ ಸಮಾರಂಭವು ಜನವರಿ 19 ರಂದು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.
ಈ ಸಂಬಂಧ ಅಂತಿಮ ಸಿದ್ಧತೆ ಬಗ್ಗೆ ಚರ್ಚಿಸಲು ನಗರದ ಉನ್ನತ ಶಿಕ್ಷಣ ಪರಿಷತ್ ನಲ್ಲಿ ನಡೆದ ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಟಿ.ಬಿ. ಜಯಚಂದ್ರ, ಬೆಂಗಳೂರು ನಗರಾಭಿವೃದಿಟಛಿ ಸಚಿವ ಕೆ.ಜೆ. ಜಾರ್ಜ್, ಆಹಾರ ಸಚಿವ ದಿನೇಶ್ ಗುಂಡೂರಾವ್, ವಾರ್ತಾ ಸಚಿವ ಆರ್. ರೋಷನ್ ಬೇಗ್ ಸಂಬಂಧಿಸಿದ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.
ಅಂದು ಬೆಳಗ್ಗೆ 11 ಗಂಟೆಗೆ ಸಭಾ ಕಾರ್ಯಕ್ರಮ ಆರಂಭವಾಗಲಿದ್ದು, ಅದಕ್ಕೂ ಮುಂಚೆ ಎರಡು ತಂಡಗಳಾಗಿ ವಿದ್ಯಾರ್ಥಿಗಳು ಜಾಥಾ ನಡೆಸಲಿ ದ್ದಾರೆ. ಶೇಷಾದ್ರಿಪುರಂನಿಂದ ಕಬ್ಬನ್ ಪಾರ್ಕ್ ವರೆಗೆ ಹಾಗೂ ಲಾಲ್‍ಬಾಗ್‍ನಿಂದ ಕಂಠೀರವ ಕ್ರೀಡಾಂಗಣದವರೆಗೆ ಜಾಥಾ ನಡೆಸುವರು.
ಈ ಜಾಥಾದಲ್ಲಿ ಸುಮಾರು 8 ಸಾವಿರ ವಿದ್ಯಾರ್ಥಿಗಳು ಭಾಗವಹಿಸುವರು. ಅವರಿಗೆ ವಿವಿಧ ಕಡೆಯಿಂದ ಆಗಮಿಸಲು ಕೆಎಸ್ಸಾರ್ಟಿಸಿಯಿಂದ ಬಸ್ಸುಗಳ ವ್ಯವಸ್ಥೆ ಮಾಡುವುದು, ಇಸ್ಕಾನ್ ಸಹಯೋಗದೊಂದಿಗೆ ಬಂದವರಿಗೆಲ್ಲ ಉಪಹಾರ ಮತ್ತು ಮಧ್ಯಾಹ್ನದ ಭೋಜನಾ ವ್ಯವಸ್ಥೆ ಮಾಡುವುದು, ಎನ್ ಎಸ್ ಯುಐ ಪ್ರಾಯೋಜಕತ್ವದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೂ ಟಿ-ಷರ್ಟ್ ವಿತರಿಸುವಂತೆ ಸಚಿವ ಟಿ.ಬಿ.ಜಯಚಂದ್ರ ಸಲಹೆ ನೀಡಿದರು.
ಅಂದಿನ ಕಾರ್ಯಕ್ರಮವು ನಾಡಗೀತೆಯೊಂದಿಗೆ ಆರಂಭವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿ ದ್ದು, ಸಾಹಿತಿ ಬರಗೂರು ರಾಮಚಂದ್ರಪ್ಪ ಪ್ರಧಾನ ಭಾಷಣ ಮಾಡುವರು. ತುಮಕೂರಿನ ಶ್ರೀರಾಮಕೃಷ್ಣ ಆಶ್ರಮದ ನಿರ್ಭಯಾನಂದ ಸ್ವಾಮೀಜಿ ಭಾಗವಹಿಸುವರು. ಇದೇ ವೇಳೆ ಸ್ವಾಮಿ ವಿವೇಕಾನಂದರ ಆದರ್ಶ ಮತ್ತು ಸಂದೇಶಗಳ ಬಗ್ಗೆ ಜಾಗೃತಿ ಮೂಡಿಸುವ ಬಗ್ಗೆ ಕಾರ್ಯಕ್ರಮಗಳನ್ನು ಘೋಷಿಸಲಾಗುವುದು ಎಂದು ಸಚಿವರು ಸಭೆಗೆ ತಿಳಿಸಿದರು. ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಭರತ್‍ಲಾಲ್ ಮೀನಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಕೆ.ಎ. ದಯಾನಂದ, ಉನ್ನತ ಶಿಕ್ಷಣ ಪರಿಷತ್ ಕಾರ್ಯನಿ ರ್ವಾಹಕ ನಿರ್ದೇಶಕ ಕೋರಿ ಉಪಸ್ಥಿತರಿದ್ದರು.