
ಹಾಸನ: ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆ ತೆರವಿಗೆ ಎಜಿ ಮತ್ತು ಕಾನೂನು ತಜ್ಞರು ಪ್ರಯತ್ನ ಮಾಡುತ್ತಿದ್ದಾರೆ. ತಡೆಯಾಜ್ಞೆ ತೆರವುಗೊಂಡರೆ ಗ್ರಾಮೀಣ ಭಾಗದ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ನೀಗುತ್ತದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದರು.
ಪ್ರತಿ ವೈದ್ಯರಿಗೆ ಸರ್ಕಾರ ರು. 30 ಲಕ್ಷ ವೆಚ್ಚ ಮಾಡುತ್ತದೆ. ಅದು ಜನರ ತೆರಿಗೆ ಹಣ. ಈ
ಕಾರಣದಿಂದ ವೈದ್ಯರು ಗ್ರಾಮೀಣ ಸೇವೆ ಮಾಡುವುದನ್ನು ಕಾನೂನಿನಡಿಯೇ ಕಡ್ಡಾಯ ಮಾಡಲಾಗಿತ್ತು. ಆದರೆ ಅದಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಭಾನುವಾರ
ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಟೆಕ್ನಿಷಿಯನ್ ಕೊರತೆ: ತಾಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಲು ಸರ್ಕಾರ ಸಿದ್ಧವಿದೆ. ಆದರೆ ಅದಕ್ಕೆ ಬೇಕಾದ ಟಿಕ್ನಿಷಿಯನ್‍ಗಳು ಸಿಗುತ್ತಿಲ್ಲ. ನರ್ಸಗಳಿಗೆ ತರಬೇತಿ ನೀಡಿ, ಕೆಲ ತಾಲೂಕು ಆಸ್ಪತ್ರೆಗಳಲ್ಲಿ ಕೇಂದ್ರಗಳನ್ನು ನಡೆಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು. ಕೆಲ ಕಾರಣಗಳಿಂದ ಮುಖ್ಯಮಂತ್ರಿ ಸಾಂತ್ವನ ಯೇಜನೆ ಆರಂಭ ವಿಳಂಬವಾಗುತ್ತಿದ್ದು, ಶೀಘ್ರದಲ್ಲೇ ಆರಂಭಿಸಲಾಗುವುದೆಂದು ಸಚಿವರು ತಿಳಿಸಿದರು.
Advertisement