ಬಡವರಿಗೆ ಸೂಪರ್ ಸ್ಪೆಷಾಲಿಟಿ ಚಿಕಿತ್ಸೆ :ಶರಣ ಪ್ರಕಾಶ ಪಾಟೀಲ್

ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ ಆವರಣದಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ನೆರವಿನೊಂದಿಗೆ ನಿರ್ಮಿಸಲಾಗುತ್ತಿರುವ ನೂತನ ಶಸ್ತ್ರ ಚಿಕಿತ್ಸಾ ಕೊಠಡಿ ಹಾಗೂ ...
ಡಾ ಶರಣ ಪ್ರಕಾಶ ಪಾಟೀಲ್
ಡಾ ಶರಣ ಪ್ರಕಾಶ ಪಾಟೀಲ್

ಬೆಂಗಳೂರು: ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ ಆವರಣದಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ನೆರವಿನೊಂದಿಗೆ ನಿರ್ಮಿಸಲಾಗುತ್ತಿರುವ ನೂತನ ಶಸ್ತ್ರ ಚಿಕಿತ್ಸಾ ಕೊಠಡಿ ಹಾಗೂ ಧರ್ಮಶಾಲಾ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ರು.120 ಕೋಟಿ ನೆರವು ದೊರೆಯಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ತಿಳಿಸಿದ್ದಾರೆ.

ಇನ್ಫೋಸಿಸ್ ಪ್ರತಿಷ್ಠಾನ ಮತ್ತು ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ ಸೋಮವಾರ ಏರ್ಪಡಿಸಿದ್ದ ಇನ್ಫೋಸಿಸ್ ಧರ್ಮಶಾಲಾ ಜೀರ್ಣೋದ್ಧಾರ ಮತ್ತು ಶಸ್ತ್ರ ಚಿಕಿತ್ಸಾ ಕೊಠಡಿ ನಿರ್ಮಾಣ ಶಂಕುಸ್ಥಾಪನೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿ, ಸಾರ್ವಜನಿಕರಿಗೆ ಮತ್ತು ಬಡವರಿಗೆ
ಉತ್ತಮ ಚಿಕಿತ್ಸೆ ದೊರಕಲಿ ಎಂಬ ಉದ್ದೇಶದಿಂದ ಸೂಪರ್ ಸ್ಪೆಷಾಲಿಟಿ ಚಿಕಿತ್ಸೆಯನ್ನು ರಾಜ್ಯದಾದ್ಯಂತ ಜಾರಿಗೆ ತರುತ್ತಿದ್ದೇವೆ. ಇನ್ಫೋಸಿಸ್‍ಗೆ ಒಂದು ವಾರದೊಳಗೆ ಜಾಗ ಹಸ್ತಾಂತರಿಸುತ್ತೇವೆ.

ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ನಾರಾಯಣಮೂರ್ತಿ ಮಾತನಾಡಿ, ಬಡ ಜನರಿಗೆ ಸಹಾಯ ಮಾಡುವ ಉದ್ದೇಶದಿಂದ ಈ ಕಾರ್ಯ ವಹಿಸಿಕೊಂಡಿದ್ದೇನೆ. ಬಡವರು ಕ್ಯಾನ್ಸರ್, ಹೃದಯ ಸಂಬಂಧ ರೋಗಗಳಿಗೆ ತುತ್ತಾದಾಗ ಚಿಕಿತ್ಸೆಗೆ ಖರ್ಚು ಮಾಡುವುದು ಕಷ್ಟವಾಗುತ್ತದೆ. ಸರ್ಕಾರ ಆದಷ್ಟು ಬೇಗ ಜಾಗ ಒದಗಿಸಿಕೊಟ್ಟರೆ. ನಾವು ಧರ್ಮಶಾಲಾ ನಿರ್ಮಿಸಿಕೊಡುತ್ತೇವೆ ಎಂದರು.

ವಿಕ್ಟೋರಿಯಾ ಆಸ್ಪತ್ರೆ ಕಟ್ಟಡ ನಿರ್ಮಾಣ ಚಾಲ್ತಿಯಲ್ಲಿದೆ. ಶಸ್ತ್ರ ಚಿಕಿತ್ಸಾ ಕೊಠಡಿ ಪೂರ್ಣಗೊಂಡ ಬಳಿಕ ಉದ್ಘಾಟಿಸಲಾಗುವುದು. ಅದೇ ರೀತಿ ಮಿಂಟೋ ಕಣ್ಣಿನ ಆಸ್ಪತ್ರೆಯ ಕೆಳ ಅಂತಸ್ತಿನ ಕಟ್ಟಡದ ಕಾರ್ಯ ಮುಗಿದಿದ್ದು, ಮೇಲಂತಸ್ತಿನ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿದೆ. ಆವರಣದಲ್ಲಿ ಟ್ರಾಮಾ ಸೆಂಟರ್ ನಿರ್ಮಾಣಗೊಳ್ಳುತ್ತಿದ್ದು, ಒಟ್ಟು 38 ವೆಂಟಿಲೇಟರ್ ಅಳವಡಿಸಲಾಗುವುದು. ಮೂರು ತಿಂಗಳ ಒಳಗಾಗಿ 40 ಹಾಸಿಗೆಗಳನ್ನು ಒದಗಿಸಿಕೊಡಲಾಗುವುದು.

ಡಾ ಶರಣ ಪ್ರಕಾಶ ಪಾಟೀಲ್ ವೈದ್ಯಕೀಯ ಶಿಕ್ಷಣ ಸಚಿವ


ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com