ಜಿಲ್ಲಾ ಪಂಚಾಯತ್ ಮೀಸಲು, ರೊಟೇಷನ್ ಪ್ರಶ್ನಿಸಿದ್ದ ಅರ್ಜಿಗಳು ವಜಾ

ರಾಜ್ಯ ಚುನಾವಣಾ ಆಯೋಗ ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೀಸಲು ಮತ್ತು ಆವರ್ತನೆ (ರೊಟೇಶನ್)ಯಲ್ಲಿ ಹಲವು ಗೊಂದಲಗಳಿವೆ ಎಂದು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿ...
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ಜಿಪಂ,ತಾಪಂ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೀಸಲು ಮತ್ತು ಆವರ್ತನೆ (ರೊಟೇಶನ್)ಯಲ್ಲಿ ಹಲವು ಗೊಂದಲಗಳಿವೆ ಎಂದು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿ ಆದೇಶಿಸಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಆಯೋಗ ಜಿಪಂ, ತಾಪಂ ಚುನಾವಣೆ ದಿನಾಂಕ ಘೋಷಿಸಿತು.

ಜಿಪಂ ಚುನಾವಣೆಗೆ ಹೊರಡಿಸಿರುವ ಮೀಸಲು ಪಟ್ಟಿಯಲ್ಲಿ ಗೊಂದಲಗಳಿದ್ದು ಚುನಾವಣೆಗೆ ತಡೆ ನೀಡಬೇಕು ಎಂದು ಕೋರಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ಸುಮಾರು 100ಕ್ಕೂ ಹೆಚ್ಚು ಅರ್ಜಿಗಳ ಹೈಕೋರ್ಟ್‍ಗೆ ಸಲ್ಲಿಕೆಯಾಗಿದ್ದವು. ವಿಚಾರಣೆ ನಡೆಸಿದ ನ್ಯಾಯಮೂರ್ತಿ  ಎಸ್.ಅಬ್ದುಲ್ ನಜೀರ್ ಅವರಿದ್ದ ನ್ಯಾಯಪೀಠ, ಅರ್ಜಿಗಳನ್ನು ವಜಾಗೊಳಿಸಿದೆ. ವಿಚಾರಣೆ ವೇಳೆ ಚುನಾವಣಾ ಆಯೋಗದ ಪರ ವಕೀಲ ಕೆ.ಎನ್.ಫಣೀಂದ್ರ, ಯಾವುದೇ ಕ್ಷೇತ್ರದಲ್ಲಿಯೂ ರೊಟೇಷನ್ ಪುನರಾ ವರ್ತಿ-ತವಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಪ್ರಸಕ್ತ ಸಲ್ಲಿಕೆಯಾಗಿರುವ ಅರ್ಜಿಗಳಂತೆಯೇ ಕಳೆದ ಬಾರಿಯೂ ಹೈಕೋರ್ಟ್ ಅರ್ಜಿದಾರರ ಪರ ಆದೇಶ ನೀಡಿತ್ತು. ಈ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ ಎಂದು ವಾದ ಮಂಡಿಸಿದ್ದರು.

ಆಯೋಗವು ಹೊರಡಿಸಿರುವ ಮೀಸಲು ಪಟ್ಟಿ ಸಂವಿಧಾನದ 243-ಡಿ ಅನುಚ್ಛೇದಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಈ ಅನುಚ್ಛೇದದ ಅನುಸಾರ ಪಂಚಾಯ್ತಿಯ ಎಲ್ಲ ಕ್ಷೇತ್ರಗಳಲ್ಲೂ ಪ್ರತಿ 5 ವರ್ಷಕ್ಕೊಮ್ಮೆ ಆವರ್ತನ ಆಗಬೇಕು. ಆದರೆ ಆಯೋಗವು ಸಂವಿಧಾನದ ಈ ಆಶಯಕ್ಕೆ ವಿರುದ್ಧವಾಗಿ ಪ್ರತಿ 10 ವರ್ಷಕ್ಕೊಮ್ಮೆ ಎಂದು ಆವರ್ತನ ನಿಗದಿ ಮಾಡಿ ಅಧಿಸೂಚನೆ ಹೊರಡಿಸಿದೆ. ಇದು ಸಂವಿಧಾನದ ಮೂಲ ಆಶಯಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರ ಆರೋಪವಾಗಿತ್ತು. ಅಲ್ಲದೆ, ಕ್ಷೇತ್ರ ಪುನರ್‍ವಿಂಗಡಣೆಗೆ ಸಂಬಂಧಿಸಿದಂತೆ ಸಲ್ಲಿಸಿದ್ದ ಸುಮಾರು 10ಕ್ಕೂ ಹೆಚ್ಚು ಅರ್ಜಿಗಳ ವಿಚಾರಣೆಯನ್ನು ಮುಂದೂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com