ಚುನಾವಣೆ ನಡೆಸಲು ತರಾತುರಿ ಏಕೆ? ಆಯೋಗಕ್ಕೆ ಕಲಬುರಗಿ ಹೈಕೋರ್ಟ್ ಪೀಠದ ಪ್ರಶ್ನೆ

ಜಿಲ್ಲಾ ಪಂಚಾಯತಿ ಚುನಾವಣೆಗೆ ಈಗಾಗಲೇ ಮಧ್ಯಂತರ ತಡೆ ನೀಡಿರುವ ಇಲ್ಲಿನ ಹೈಕೋರ್ಟ್ ವಿಭಾಗೀಯ ಪೀಠ, ಪ್ರಕರಣದ ವಿಚಾರಣೆಯನ್ನು ಫೆ.2ಕ್ಕೆ ..
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕಲಬುರಗಿ: ಜಿಲ್ಲಾ ಪಂಚಾಯತಿ ಚುನಾವಣೆಗೆ ಈಗಾಗಲೇ ಮಧ್ಯಂತರ ತಡೆ ನೀಡಿರುವ ಇಲ್ಲಿನ ಹೈಕೋರ್ಟ್ ವಿಭಾಗೀಯ ಪೀಠ, ಪ್ರಕರಣದ ವಿಚಾರಣೆಯನ್ನು ಫೆ.2ಕ್ಕೆ ಮುಂದೂಡಿದೆ. ಇದರ ಜತೆಗೆ, ಚುನಾವಣೆ ನಡೆಸಲು ಇಷ್ಟೊಂದು ತರಾತುರಿ ಏಕೆ ಎಂದು ಚುನಾವಣಾ ಆಯೋಗವನ್ನು ಪ್ರಶ್ನಿಸಿರುವ ಅದು, ಅನ್ಯಾಯವಾಗಿದೆ ಎಂದು ಕೋಟ್ರ್ ಗೆ ಬಂದವರನ್ನು ಹಾಗೆಯೇ ಬಿಡಲಾಗುತ್ತದೆಯೇ  ಎಂದು ಅಸಮಾಧಾನ ಹೊರಹಾಕಿದೆ.

ಮೀಸಲಾತಿಯಲ್ಲಿ ಅನ್ಯಾಯವಾಗಿದೆ ಎಂದು ಆಕಾಂಕ್ಷಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಅಂಗೀಕರಿಸಿದ್ದ ನ್ಯಾ.ರಾಮಮೋಹನ ರೆಡ್ಡಿ ಅವರಿದ್ದ ನ್ಯಾಯಪೀಠ ಜ.7ರಂದು ಚುನಾವಣೆಯ ಮೀಸಲಾತಿ ಅಧಿಸೂಚನೆಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಮಂಗಳವಾರ ಈ ಪ್ರಕರಣದ ವಿಚಾರಣೆ ನಡೆಸಿದ ಪೀಠ, ವಿಚಾರಣೆಯನ್ನು ಫೆ. 2ಕ್ಕೆ ಮುಂದೂಡಿತು.

ಮೀಸಲು ಅಧಿಸೂಚನೆಗೆ ಮಧ್ಯಂತರ ತಡೆ ನೀಡಲಾಗಿರುವ ಕಲಬುರಗಿ, ರಾಯಚೂರು, ಬೀದರ್, ಯಾದಗಿರಿ, ವಿಜಯಪುರ ಜಿಪಂ ಚುನಾವಣೆ ಹೊರತುಪಡಿಸಿ ಉಳಿದೆಲ್ಲೆಡೆ ಜಿಪಂ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ.

ಅಸಮಾಧಾನ: ಮೀಸಲಲ್ಲಿ ಅನ್ಯಾಯವಾಗಿದೆ ಎಂದು ಬಂದವರನ್ನು ಹಾಗೇ ಬಿಡಲಾಗುತ್ತದೆಯೇ? ಚುನಾವಣೆಗೆ ಇಷ್ಟೊಂದು ತರಾತುರಿ ಏಕೆ ಎಂದು ಪ್ರಶ್ನಿಸಿರುವ ಕೋರ್ಟ್, ಪ್ರಕರಣ ಇತ್ಯರ್ಥವಾಗುವ ಮುಂಚೆಯೇ ದಿನಾಂಕ ಘೋಷಣೆ ಮಾಡಿರುವ ಆಯೋಗದ ಕ್ರಮದ ಬಗ್ಗೆ ಅಸಮಾಧಾನ ಹೊರಹಾಕಿದೆ.


ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com