ಬೆಂಗಳೂರು: ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾಗೆ ಔಪಚಾರಿಕವಾಗಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಗೆ ಭೇಟಿ ನೀಡುವುದಕ್ಕೆ ಅನುಮತಿ ನೀಡಿರುವ ಹೈಕೋರ್ಟ್, ಭೇಟಿಯ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಪ್ರಚೋದನಾಕಾರಿ ಭಾಷಣ ಮಾಡಬಾರದು ಎಂದು ಎಚ್ಚರಿಕೆ ನೀಡಿದೆ.
ಜನವರಿ 18ರಿಂದ 24ರವರೆಗೆ ಮಂಗಳೂರು ನಗರ ಪ್ರವೇಶಿಸಿದಂತೆ ತಮಗೆ ನಿರ್ಬಂಧ ಹೇರಿದ ಸ್ಥಳೀಯ ಪೊಲೀಸ್ ಆಯುಕ್ತರ ಆದೇಶ ಪ್ರಶ್ನಿಸಿ ಪ್ರವೀಣ್ ತೊಗಾಡಿಯಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ನಡುವೆ ಮಂಗಳೂರಿಗೆ ಭೇಟಿ ನೀಡದೆ ಬೆಂಗಳೂರಿನಿಂದ ರಸ್ತೆ ಮಾರ್ಗದಲ್ಲಿ ಶೃಂಗೇರಿಗೆ ಭೇಟಿ ನೀಡಲು ಕಾರ್ಯಕ್ರಮ ಬದಲಾಯಿಸಿಕೊಂಡಿದ್ದರು.
Advertisement