ಜಿಲ್ಲಾ ಸುದ್ದಿ

ದಂಡ ಪ್ರವರ ಇನ್ನೂ ತೀವ್ರ

ಹಿಂಬದಿ ಸವಾರರಿಗೂ ಹೆಲ್ಮೆಟ್ ಧರಿಸಬೇಕೆಂಬ ಕಡ್ಡಾಯ ನಿಯಮ ಉಲ್ಲಂಘಿಸಿದ ಬೈಕ್ ಸವಾರರಿಗೆ ದಂಡ ವಿಧಿಸುವ ಕಾರ್ಯಾಚರಣೆಯನ್ನು...

ದಂಡ ಪ್ರವರ ಇನ್ನೂ ತೀವ್ರ
ಹಿಂಬದಿ ಸವಾರರಿಗೆ ಹೆಲ್ಮೆಟ್ ತೊಡಿಸದವರಿಗೆ ಬುದ್ದಿ ಹೇಳುತ್ತಿರುವ ಟ್ರಾಫಿಕ್ ಪೊಲೀಸ್, ಬಲ ಚಿತ್ರದಲ್ಲಿ ಹೆಲ್ಮೆಟ್ ಕಡ್ಡಾಯದ ಬಗ್ಗೆ ತಿಳಿ ಹೇಳುತ್ತಿರುವ ಪೊಲೀಸ್ ಸಿಬ್ಬಂದಿ
Published On :

ಬೆಂಗಳೂರು: ಹಿಂಬದಿ ಸವಾರರಿಗೂ ಹೆಲ್ಮೆಟ್ ಧರಿಸಬೇಕೆಂಬ ಕಡ್ಡಾಯ ನಿಯಮ ಉಲ್ಲಂಘಿಸಿದ ಬೈಕ್ ಸವಾರರಿಗೆ ದಂಡ ವಿಧಿಸುವ ಕಾರ್ಯಾಚರಣೆಯನ್ನು ಬೆಂಗಳೂರು ನಗರ ಸಾರಿಗೆ ಪೊಲೀಸರು ತೀವ್ರಗೊಳಿಸಿದ್ದು, ಗುರುವಾರ ಹೆಲ್ಮೆಟ್ ಧರಿಸದೇ ಸವಾರಿ ಮಾಡುತ್ತಿದ್ದ ಐದು ಸಾವಿರಕ್ಕೂ ಹೆಚ್ಚು ಸವಾರರು ದಂಡ ತೆತ್ತಿದ್ದಾರೆ.

ಸರ್ಕಾರದ ನಿಯಮ ಮೀರಿ, ಹಿಂಬದಿ ಸವಾರರಿಗೆ ಹೆಲ್ಮೆಟ್ ಹಾಕಿಸದೆ ಬೈಕ್ ಸವಾರಿ ಮಾಡುತ್ತಿದ್ದ ಸುಮಾರು 5,861 ವಾಹನ ಸವಾರರಿಗೆ ಟ್ರಾಫಿಕ್ ಪೊಲೀಸರು ಗುರುವಾರ ದಂಡ ವಿ ಧಿಸಿದ್ದಾರೆ.

ನಗರದ ಪೂರ್ವ ಹಾಗೂ ಪಶ್ಟಿಮ ವಿಭಾಗಗಳಲ್ಲಿನ ವಿವಿಧ ಸ್ಥಳಗಳಲ್ಲಿ ಸಾರಿಗೆ ಇಲಾಖೆ ಹಾಗೂ ನಗರ ಸಂಚಾರ ಪೊಲೀಸರು ಕಟ್ಟುನಿಟ್ಟಿನ ಕಾರ್ಯಾಚರಣೆ ನಡೆಸಿದ್ದಾರೆ.
ಈ ವೇಳೆ ಪೂರ್ವ ವಿಭಾಗದಲ್ಲಿ 2,924 ಮತ್ತು ಪಶ್ಚಿಮ ವಿಭಾಗದಲ್ಲಿ 2,937 ಸೇರಿದಂತೆ 5,861 ಚಾಲಕರ ವಿರುದ್ಧ ದಂಡ ವಿಧಿಸಿದ್ದಾರೆ. ಹೆಲ್ಮೆಟ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರಿಂದ ಹೆಲ್ಮೆಟ್ ಖರೀದಿಗಾಗಿ ಸಂಚಾರ ಪೊಲೀಸರು ಜನವರಿ 20ರವರೆಗೆ ಗಡುವು ನೀಡಿದ್ದರು.

ಗಡುವು ಮುಕ್ತಾಯವಾದ ಹಿನ್ನೆಲೆಯಲ್ಲಿ ಬುಧವಾರ ನಗರದ ವಿವಿಧ ಸ್ಥಳಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರ ಪೊಲೀಸರು, ಮೊದಲ ದಿನವೇ 1,520 ವಾಹನ ಸವಾರರಿಗೆ ದಂಡ ವಿಧಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.