ಭ್ರಷ್ಟರ ಶಿಕ್ಷೆಗೆ ಕಾನೂನು ತಿದ್ದುಪಡಿಯಾಗಲಿ

ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳಿಗೆ ಶಿಕ್ಷೆಯಾಗುವಂತೆ ಕಾನೂನು ತಿದ್ದುಪಡಿಯಾಗಬೇಕು ಎಂದು ಸ್ವಾತಂತ್ರ್ಯ ಹೋರಾಟಗಾರ ಹೆಚ್ಎಸ್ ದೊರೆಸ್ವಾಮಿ ಆಗ್ರಹಿಸಿದರು.
ಆಮ್ ಆದ್ಮಿ ಪಕ್ಷದ ಲಂಚಮುಕ್ತ ಕರ್ನಾಟಕ ಕಾರ್ಯಕ್ರಮದಲ್ಲಿ  ಸ್ವಾತಂತ್ರ್ಯ ಹೋರಾಟಗಾರ ಹೆಚ್ಎಸ್ ದೊರೆಸ್ವಾಮಿ
ಆಮ್ ಆದ್ಮಿ ಪಕ್ಷದ ಲಂಚಮುಕ್ತ ಕರ್ನಾಟಕ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಹೆಚ್ಎಸ್ ದೊರೆಸ್ವಾಮಿ

ಬೆಂಗಳೂರು: ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳಿಗೆ ಶಿಕ್ಷೆಯಾಗುವಂತೆ ಕಾನೂನು ತಿದ್ದುಪಡಿಯಾಗಬೇಕು ಎಂದು ಸ್ವಾತಂತ್ರ್ಯ ಹೋರಾಟಗಾರ ಹೆಚ್ಎಸ್ ದೊರೆಸ್ವಾಮಿ ಆಗ್ರಹಿಸಿದರು.
ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷ ಕೈಗೊಂಡಿರುವ ಲಂಚಮುಕ್ತ ಕರ್ನಾಟಕ ಹೋರಾಟದ 100 ನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾನೂನು ತಿದ್ದುಪಡಿಯಾಗುವಂತಹ ಹೋರಾಟಗಳನ್ನು ಆಮ್ ಆದ್ಮಿ ಪಕ್ಷವು ಕೈಗೊಳ್ಳಬೇಕಿದೆ. ಎಲ್ಲಿಯವರೆಗೆ ಅಧಿಕಾರಿಗಳಿಗೆ ಶಿಕ್ಷೆಯಾಗುವುದಿಲ್ಲವೋ ಅಲ್ಲಿಯವರೆಗೆ ಭ್ರಷ್ಟಾಚಾರ ನಿರ್ಮೂಲನೆ ಸಾಧ್ಯವಿಲ್ಲ ಎಂದು ಹೇಳಿದರು.
ಪ್ರತಿಯೊಂದಕ್ಕೂ ಹಣವೇ ಪ್ರಧಾನವಾಗಿರುವ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷವು ದೇಶದ ಸಮಸ್ಯೆಗಳ ಪರಿಹಾರಕ್ಕೆ ನಿರಂತರ ಹೋರಾಡಿದಾಗ ಜನಪರ ಹೋರಾಟವಾಗಲಿದೆ. ಭ್ರಷ್ಟಾಚಾರ ನಿರ್ಮೂಲನೆ ಅದ್ಭುತ ಕೆಲಸ. ಆರ್.ಟಿ.ಒ ತಹಶೀಲ್ದಾರ್ ಕಚೇರಿ ಮರಳು ದಂಧೆ ಯಾವುದೇ ಆಗಿರಲಿ ದುರಾಡಳಿತಕ್ಕೆ ಎಡೆಕೊಡಬಾರದು. ಯುವಜನತೆ ಭ್ರಷ್ಟಾಚಾರದ ವಿರುದ್ಧ ಎಚ್ಚೆತ್ತುಕೊಳ್ಳಬೇಕಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಎಎಪಿಗೆ ಸೇರಿ ಹೋರಾಟಕ್ಕೆ ಕೈಜೋಡಿಸಲಿ ಎಂದು ಸಲಹೆ ನೀಡಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com