ಕೆಂಪೇಗೌಡ ಸಮಾಧಿ ಅಭಿವೃದ್ಧಿಗೆ 2 ಕೋಟಿ ರೂ ವೆಚ್ಚ
ರಾಮನಗರ: 2 ಕೋಟಿ ರೂ ವೆಚ್ಚದಲ್ಲಿ ಮಾಗಡಿ ತಾಲೂಕಿನ ಕುದೂರು ಹೋಬಳಿಯ ಕೆಂಪಾಪುರ ಗ್ರಾಮದಲ್ಲಿ ಪತ್ತೆಯಾಗಿರುವ ನಾಡಪ್ರಭು ಕೆಂಪೇಗೌಡರ ಸಮಾಧಿಯನ್ನು ಅಭಿವದ್ಧಿಗೊಳಿಸಲಾಗುವುದು ಎಂದು ರಾಜ್ಯ ಪುರಾತತ್ವ ಇಲಾಖೆ ತಿಳಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬೆಂಗಳೂರು ವಿವಿಯ ನಾಡಪ್ರಭು ಕೆಂಪೇಗೌಡ ಮಾನವಿಕ ಮತ್ತು ಸಮಾಜ ವಿಜ್ಞಾನ ಕೇಂದ್ರದ ನಿರ್ದೇಶಕ ಎನ್.ಶೇಕ್ ಮಸ್ತಾನ್ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿತ್ತು. ಈ ಸಮಿತಿ ಸಮಾಧಿ ಕೆಂಪೇಗೌಡರಿಗೆ ಸೇರಿದ್ದು ಎಂಬುದನ್ನು ಖಚಿತಪಡಿಸಿದೆ. ಹೀಗಾಗಿ ಸಮಾಧಿ ಅಭಿವೃದ್ಧಿಗೆ 2.36 ಕೋಟಿ ರೂ.ಗಳ ಯೋಜನೆಯನ್ನು ತಯಾರಿಸಲಾಗಿದೆ.
ಕೆಂಪೇಗೌಡರ ಸಮಾಧಿ ಅಭಿವೃದ್ಧಿಗೆ 2 ಕೋಟಿ ರೂ.ಗಳ ಯೋಜನೆ ಸಿದ್ಧಪಡಿಸಲಾಗಿದ್ದು, 2 ಎಕರೆ ಜಾಗ ನೀಡುವಂತೆ ಸರ್ಕಾರಕ್ಕೆ ಕೋರಿತ್ತು. ಜಿಲ್ಲಾಧಿಕಾರಿಗಳು ಜಾಗವನ್ನು ಸ್ವಾಧೀನಪಡಿಸಿಕೊಳ್ಳಲು ಆದೇಶ ಹೊರಡಿಸಿದ್ದಾರೆ.. ಪುರಾತತ್ವ ಇಲಾಖೆ ಸ್ಥಳವನ್ನು ಅಭಿವೃದ್ಧಿಪಡಿಸಿದ ಬಳಿಕ, ಮುಂದಿನ ಅಭಿವೃದ್ಧಿಗೆ ಸಮಾಧಿ ಸ್ಥಳವನ್ನು ಬಿಬಿಎಂಪಿ ವಶಕ್ಕೆ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದು ಮೇಯರ್ ಬಿ.ಎನ್. ಮಂಜುನಾಥ ರೆಡ್ಡಿ ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ