ಕೇಂದ್ರ ಕಾರಾಗೃಹ
ಜಿಲ್ಲಾ ಸುದ್ದಿ
ಸನ್ನಡತೆ ಆಧಾರದ ಮೇಲೆ ಪರಪ್ಪನ ಅಗ್ರಹಾರ ಜೈಲಿನ 98 ಖೈದಿಗಳ ಬಿಡುಗಡೆ
ಗಣರಾಜ್ಯೋತ್ಸವದ ಕೊಡುಗೆಯಾಗಿ ರಾಜ್ಯ ಸರ್ಕಾರ ಮಂಗಳವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 98
ಬೆಂಗಳೂರು: ಗಣರಾಜ್ಯೋತ್ಸವದ ಕೊಡುಗೆಯಾಗಿ ರಾಜ್ಯ ಸರ್ಕಾರ ಮಂಗಳವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 98 ಖೈದಿಗಳನ್ನು ಸನ್ನಡತೆ ಆಧಾರದ ಮೇಲೆ ಮಂಗಳವಾರ ಬಿಡುಗಡೆ ಮಾಡಲಾಗಿದೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ನೇತೃತ್ವದಲ್ಲಿ ಇಂದು ಪರಪ್ಪನ ಅಗ್ರಹಾರದಲ್ಲಿದ್ದ 98 ಖೈದಿಗಳನ್ನು ಬಿಡುಗಡೆ ಮಾಡಲಾಯಿತು.
ರಾಜ್ಯದ ವಿವಿಧ ಜೈಲುಗಳಲ್ಲಿ ಬಂಧಿಯಾಗಿರುವ 375 ಖೈದಿಗಳ ಬಿಡುಗಡೆಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು.
ಬೆಂಗಳೂರು, ಧಾರವಾಡ, ಬಳ್ಳಾರಿ, ಕಲಬುರ್ಗಿ, ಬೆಳಗಾವಿ, ಮೈಸೂರು ಹಾಗೂ ವಿಜಯಪುರ ಜಿಲ್ಲಾ ಕಾರಾಗೃಹದಲ್ಲಿ 14 ವರ್ಷ ಶಿಕ್ಷೆ ಅನುಭವಿಸಿರುವ 255 ಮಾಫಿ ಸಹಿತ ಹಾಗೂ 120 ಖೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಇದರಲ್ಲಿ 13 ಮಹಿಳೆಯರು ಸೇರಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ