ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ಹೆಚ್ಚಿದ ದೌರ್ಜನ್ಯ: ಉಗ್ರಪ್ಪ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ,ಪ್ರಕರಣಗಗಳು ಕಂಂಡು ಬರುತ್ತಿದ್ದರೂ ಶೋಷಣೆ ತಡೆಯಲು ದಕ್ಷಿಣ ಕನ್ನಡ ..
ವಿ.ಎಸ್ ಉಗ್ರಪ್ಪ
ವಿ.ಎಸ್ ಉಗ್ರಪ್ಪ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ,ಪ್ರಕರಣಗಗಳು ಕಂಂಡು ಬರುತ್ತಿದ್ದರೂ ಶೋಷಣೆ ತಡೆಯಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಅತ್ಯಾಚಾರ ನಿಯಂತ್ರಣಕ್ಕೆ ಸಂಬಂಧಿಸಿದ ತಜ್ಞರ ಸಮಿತಿ ಅಧ್ಯಕ್ಷ ವಿ.ಎಸ್‌. ಉಗ್ರಪ್ಪ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆಸಿದ ಪರಿಶೀಲನಾ ಸಭೆಯ ವಿವರಗಳನ್ನು ನೀಡಿದರು. 500 ಕ್ಕೂ ಹೆಚ್ಚು ಮಹಿಳೆಯರು ಅನುಮಾಸ್ಪಾದವಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

ಹತ್ತು ವರ್ಷಗಳ ಅವಧಿಯಲ್ಲಿ ಜಿಲ್ಲೆಯಾದ್ಯಂತ ಸಾಕಷ್ಟು ಅತ್ಯಾಚಾರ, ಮಹಿಳೆಯರ ಶೋಷಣೆ, ದೌರ್ಜನ್ಯ, ನಾಪತ್ತೆ, ವರದಕ್ಷಿಣೆ ಪ್ರಕರಣಗಳು ದಾಖಲಾಗಿವೆ. ಆದರೆ, ಬೆರಳೆಣಿಕೆ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಿದೆ. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಲು ಗೃಹ ಇಲಾಖೆ ಮತ್ತು ಜಿಲ್ಲಾಡಳಿತ ವಿಫಲವಾಗಿದೆ’ ಎಂದು ಹೇಳಿದರು.

ಮಂಗಳೂರು ಮತ್ತು ಇತರ ಕಡೆಗಳಲ್ಲಿ ಗೂಂಡಾಗಿರಿ, ಕೋಮು ಸಂಘರ್ಷಗಳು ಹೆಚ್ಚುತ್ತಿವೆ. ಅಸಹಜ ಸಾವಿನ ಪ್ರಕರಣಗಳಲ್ಲಿ ಏರಿಕೆಯಾಗಿದೆ. ಆದರೆ, ಪೊಲೀಸ್‌ ಅಧಿಕಾರಿಗಳು, ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ದೂರಿದರು. ಜಿಲ್ಲೆಯ ಲಿಂಗಾನುಪಾತದಲ್ಲಿ ತುಂಬಾ ವ್ಯತ್ಯಾಸವಿದೆ. 1000 ಗಂಡು ಮಕ್ಕಳಿಗೆ 970 ಹೆಣ್ಣು ಮಕ್ಕಳಿದ್ದಾರೆ. ಜಿಲ್ಲೆಯಲ್ಲಿ ಆಸ್ಪತ್ರೆಗಳಿಗಿಂತಲೂ ಹೆಚ್ಚು ಸ್ಕ್ಯಾನಿಂಗ್‌ ಕೇಂದ್ರಗಳಿವೆ. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಂಗಳೂರಿನ ಹೃದಯ ಭಾಗದಲ್ಲಿರುವ ಕ್ರೀಡಾ ಹಾಸ್ಟೆಲ್‌ನಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಅವಕಾಶ  ಕಲ್ಪಿಸಲಾಗಿದೆ. ಒಂದು ಕೊಠಡಿಯಲ್ಲಿ 16 ಕ್ರೀಡಾಪಟುಗಳಿಗೆ ವಸತಿ ಕಲ್ಪಿಸಲಾಗಿದೆ. ಒಟ್ಟು ನಾಲ್ಕು ಕೋಣೆಗಳನ್ನು ಕೀಡಾಳುಗಳಿಗೆ ಮೀಸಲಿಡಲಾಗಿದೆ. ಗಂಡು ಮತ್ತು ಹೆಣ್ಣು ಮಕ್ಕಳಿಗೆ ಅಲ್ಲಿ ಪ್ರತ್ಯೇಕ ವ್ಯವಸ್ಥೆ ಇಲ್ಲ. ಅಲ್ಲಿನ ಸೌಲಭ್ಯ ಸುಧಾರಣೆಗೆ ಕ್ರೀಡಾ ಇಲಾಖೆ ಕ್ರಮ ಕೈಗೊಂಡಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅತ್ಯಾಚಾರ ಸಂತ್ರಸ್ತರಿಗೆ ಅನುದಾನ ನೀಡುವಲ್ಲೂ ಜಿಲ್ಲಾಡಳಿತ ಸೋತಿದೆ.  10 ವರ್ಷಗಳಲ್ಲಿ ಮಂಗಳೂರು ನಗರದಲ್ಲಿ 129 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 106 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಆದರೆ, 9 ಮಂದಿಗೆ ಮಾತ್ರ ಪರಿಹಾರ ನೀಡಲಾಗಿದೆ’ ಎಂದು ಮಾಹಿತಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com