

ಕೊಪ್ಪಳ: ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲ್ಲೂಕು ಮ್ಯಾದನೇರಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಮದುವೆ ದಿಬ್ಬಣಕ್ಕೆ ತೆರಳುತ್ತಿದ್ದ ಬಸ್ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದ್ದು ಐವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ಅಪಘಾತದಲ್ಲಿ ಬಾಲಕ ಮತ್ತು ಮಹಿಳೆ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದು, ಮೃತರು ಮಹಾರಾಷ್ಟ್ರದ ಅಹಮದ್ ನಗರ ಮೂಲದವರು ಎಂದು ತಿಳಿದುಬಂದಿದೆ.
ಲಾರಿ ಮತ್ತು ಮಿನಿ ಬಸ್ ಮಧ್ಯೆ ಅಪಘಾತ ಸಂಭವಿಸಿದ್ದು ಒಬ್ಬ ಬಾಲಕ ಹಾಗೂ ಮಹಿಳೆ ಸೇರಿದಂತೆ ದಿಬ್ಬಣಕ್ಕೆ ತೆರಳುತ್ತಿದ್ದ ಐವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಬಾಲಗಕೋಟೆ ಜಿಲ್ಲಾ ಆಸ್ಪತ್ರೆ ಹಾಗೂ ಇಳಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೇವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.