
ಚನ್ನಪಟ್ಟಣ: ಪಂಚಾಯಿತಿ ಚುನಾವಣೆಯಲ್ಲಿ ಟಿಕೆಟ್ ತ್ಯಾಗ ಮಾಡಿದವರಿಗೆ ನಿಗಮ ಮಂಡಳಿಯಲ್ಲಿ ಅವಕಾಶ ನೀಡುತ್ತೇನೆ. ಇದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಿರುವ ಆಫರ್.
ಇಲ್ಲಿನ ಹೊಂಗನೂರು ಗ್ರಾಮದ ಅರಸು ಸಮುದಾಯಭವನದಲ್ಲಿ ಕರೆಯಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ ನಿಂದ ಆಕಾಂಕ್ಷಿಗಳ ಸಂಖ್ಯೆ ಸಹಜವಾಗಿಯೇ ಹೆಚ್ಚಾಗಿದೆ. ಆದರೆ ಒಂದು ಕ್ಷೇತ್ರದಿಂದ ಒಬ್ಬರಿಗೆ ಮಾತ್ರ ಅವಕಾಶ ನೀಡಲು ಸಾಧ್ಯ. ಅವಕಾಶ ವಂಚಿತರು ಯಾವುದೇ ಗೊಂದಲ ಉಂಟುಮಾಡದೇ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ. ಗೆಲ್ಲುವ ಅಭ್ಯರ್ಥಿಯನ್ನು ಗುರುತಿಸಿ ಪಕ್ಷದ ವತಿಯಿಂದ ಅವಕಾಶ ನೀಡಲಾಗುವುದು. ಪಂಚಾಯಿತಿಯಲ್ಲಿ ಸ್ಪರ್ಧೆಗೆ ಅವಕಾಶ ಸಿಗುವವರಿಗೆ ಸರ್ಕಾರದ ವಿವಿಧ ನಿಗಮ ಮಂಡಳಿಗೆ ಅಧಿಕಾರ ನೀಡಲಾಗುವುದು ಎಂದರು. ಸಂಸದ ಡಿ.ಕೆ ಸುರೇಶ್ ಮಾತನಾಡಿ, ಕಳೆದ ಬಾರಿ ಬಿಜೆಪಿಯಲ್ಲಿದ್ದ ಯೋಗೇಶ್ವರ್ ನಮ್ಮ ಪಕ್ಷದೊಂದಿಗೆ ಕೈ ಜೋಡಿಸಿದ್ದಾರೆ ಎಂದರು.
Advertisement