ಭಾರಿ ಬ್ಯಾಗ್ ಚೋರ ಪೊಲೀಸರ ಬಲೆಗೆ

ಆಸ್ಪತ್ರೆಗಳಲ್ಲಿ ಬ್ಯಾಗ್ ಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಮಲ್ಲೇಶ್ವರ ಠಾಣೆ ಪೊಲೀಸರು, ರು.75 ಸಾವಿರ ಮೌಲ್ಯದ ಲ್ಯಾಪ್ ಟಾಪ್, ಎರಡು ಮೊಬೈಲ್, ಕ್ಯಾಮೆರಾ, ಟ್ಯಾಬ್ ಸೇರಿ 30 ಬ್ಯಾಗ್ ಗಳನ್ನು ವಶಪಡಿಸಿಕೊಂಡಿದ್ದಾರೆ...
(ಸಾಂದರ್ಭಿಕ  ಚಿತ್ರ)
(ಸಾಂದರ್ಭಿಕ ಚಿತ್ರ)
Updated on: 

ಬೆಂಗಳೂರು: ಆಸ್ಪತ್ರೆಗಳಲ್ಲಿ ಬ್ಯಾಗ್ ಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಮಲ್ಲೇಶ್ವರ ಠಾಣೆ ಪೊಲೀಸರು, ರು.75 ಸಾವಿರ ಮೌಲ್ಯದ ಲ್ಯಾಪ್ ಟಾಪ್, ಎರಡು ಮೊಬೈಲ್, ಕ್ಯಾಮೆರಾ, ಟ್ಯಾಬ್ ಸೇರಿ 30 ಬ್ಯಾಗ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಗಂಗೊಂಡನಹಳ್ಳಿ ರಸ್ತೆಯ ಶಾಂತಿ ನಗರದ ನಿವಾಸಿ ರಾಮಕೃಷ್ಣ (39) ಬಂಧಿತ. ಆರೋಪಿಯು ಮಲ್ಲೇಶ್ವರದ ಕೆ.ಸಿ.ಜನರಲ್ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್ ಮತ್ತು ಚಿಕಿತ್ಸೆಗೆ ಬರುವ ರೋಗಿಗಳ ಬ್ಯಾಗ್ ಎಗರಿಸುತ್ತಿದ್ದ. ಈ ಸಂಬಂಧ ದಾಖಲಾದ ದೂರುಗಳನ್ನು ಆಧರಿಸಿ ಪೊಲೀಸರು ಕಾರ್ಯಾಚರಣೆ ಮುಂದಾಗಿದ್ದರು. ಆರೋಪಿಯು ಜ.24 ರಂದು ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಬ್ಯಾಗ್ ಕದಿಯಲು ಬಂದಾಗ ಸಿಕ್ಕಿ ಬಿದ್ದಿದ್ದಾನೆ.

ಆರೋಪಿ ರಾಮಕೃಷ್ಣ ಕಳದೆ ಒಂದೂವರೆ ವರ್ಷದಿಂದ ಆಸ್ಪತ್ರೆಗಳಲ್ಲಿ ಬ್ಯಾಗ್, ಮೊಬೈಲ್, ಲ್ಯಾಪ್ ಟಾಪ್ ಕಳವು ಮಾಡುತ್ತಿದ್ದ. ಆಟೋ ರಿಕ್ಷಾದಲ್ಲಿ ಆಸ್ಪತ್ರೆಗೆ ಬರುತ್ತಿದ್ದ ಈತ, ಕ್ಷಣ ಮಾತ್ರದಲ್ಲಿ ಬ್ಯಾಗ್ ಎಗರಿಸಿ ಪರಾರಿಯಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ಬಂಧನದಿಂದ ಮಲ್ಲೇಶ್ವರ ಠಾಣೆಯಲ್ಲಿ 4 ಮತ್ತು ವಿಕ್ಟೋರಿಯಾ ಠಾಣೆಯಲ್ಲಿ 1 ಬ್ಯಾಗ್ ಕಳವು ಪ್ರಕರಣ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com