ಫೆ.3ರಿಂದ ಗೂಡ್ಸ್ ವಾಹನಗಳ ಸಂಚಾರ ನಿಷೇಧ

ಬೆಂಗಳೂರು ಅರಮನೆ ಮೈದಾನದಲ್ಲಿ ಫೆ.3 ರಿಂದ 5 ರವರೆಗೆ ಇನ್ ವೆಸ್ಟ್ ಕರ್ನಾಟಕ-2016 ಸಮಾವೇಶ ನಡೆಯುವ ಹಿನ್ನೆಲೆಯಲ್ಲಿ ಹೂಡಿಕೆದಾರರು ಮತ್ತು ಗಣ್ಯರ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಲು ಫೆ.1 ರಿಂದ 5ರವರೆಗೆ ಬಳ್ಳಾರಿ ರಸ್ತೆ ಮತ್ತು ಸುತ್ತಮುತ್ತಲ ರಸ್ತೆಗಳಲ್ಲಿ ಸಣ್ಣ ಮತ್ತು ಮಧ್ಯಮ...
(ಸಾಂದರ್ಭಿಕ  ಚಿತ್ರ)
(ಸಾಂದರ್ಭಿಕ ಚಿತ್ರ)
Updated on

ಬೆಂಗಳೂರು: ಬೆಂಗಳೂರು ಅರಮನೆ ಮೈದಾನದಲ್ಲಿ ಫೆ.3 ರಿಂದ 5 ರವರೆಗೆ ಇನ್ ವೆಸ್ಟ್ ಕರ್ನಾಟಕ-2016 ಸಮಾವೇಶ ನಡೆಯುವ ಹಿನ್ನೆಲೆಯಲ್ಲಿ ಹೂಡಿಕೆದಾರರು ಮತ್ತು ಗಣ್ಯರ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಲು ಫೆ.1 ರಿಂದ 5ರವರೆಗೆ ಬಳ್ಳಾರಿ ರಸ್ತೆ ಮತ್ತು ಸುತ್ತಮುತ್ತಲ ರಸ್ತೆಗಳಲ್ಲಿ ಸಣ್ಣ ಮತ್ತು ಮಧ್ಯಮ ಗಾತ್ರದ ಗೂಡ್ಸ್ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ನಿರ್ಬಂಧ

ಬಳ್ಳಾರಿ ರಸ್ತೆಯ ಯಲಹಂಕದಿಂದ ಮೇಖ್ರಿ ವೃತ್ತ, ರಮಣಮಹರ್ಶಿ ರಸ್ತೆಯ ಮೇಖ್ರಿ ವೃತ್ತದಿಂದ ಕಾವೇರಿ ಜಂಕ್ಷನ್, ಸ್ಯಾಂಕಿ ರಸ್ತೆಯ ರಾಜಭವನದಿಂದ ಯಶವಂತಪುರ ವೃತ್ಥ, ಸಿ.ವಿ.ರಾಮನ್ ರಸ್ತೆಯ ಐಐಎಸ್ ಸಿಯಿಂದ ಮೇಖ್ರಿ ವೃತ್ತ, ಜಯಮಹಲ್ ರಸ್ತೆಯ ಮೇಖ್ರಿ ವೃತ್ತದಿಂದ ಕಂಟೋನ್ಮೆಂಟ್ ರೈಲು ನಿಲ್ದಾಣ, ಕನ್ನಿಂಗ್ ಹ್ಯಾಮ್ ರಸ್ತೆಯ ಬಾಳೇಕುಂದ್ರಿ ವೃತ್ತದಿಂದ ಲೀ ಮೆರಿಡಿಯನ್ ಹೋಟೆಲ್, ಇನ್ ಫೆಂಟ್ರಿ ರಸ್ತೆಯ ಅಲಿ ಆಸ್ಕರ್ ರಸ್ತೆಯಿಂದ ಸಂಚಾರ ಕೇಂದ್ರ ಕಚೇರಿ, ರಾಜಭವನ ರಸ್ತೆಯ ಸಿಟಿಒದಿಂದ ಬಸವೇಶ್ವರ ವೃತ್ತ, ರೇಸ್ ಕೋರ್ಸ್ ರಸ್ತೆಯ ಬಸವೇಶ್ವರ ವೃತ್ತದಿಂದ ಆನಂದ ರಾವ್ ವೃತ್ತ, ಕುಮಾರಕೃಪ ರಸ್ತೆಯ ವಿಂಡ್ಸರ್ ಮ್ಯಾನರ್ ಜಂಕ್ಷನ್ ನಿಂದ ಶಿವಾನಂದ ವೃತ್ತದವರೆಗೆ ಫೆ.1 ರಿಂದ 5 ರವರೆಗೆ ಬೆಳಗ್ಗೆ 6 ರಿಂದ ರಾತ್ರಿ 10 ರವರೆಗೆ ಸಣ್ಣ ಮತ್ತು ಮಧ್ಯಮ ಗಾತ್ರದ ಗೂಡ್ಸ್ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com