

ಬೆಂಗಳೂರು: ಜ್ಞಾನಭಾರತಿ ಮುಖ್ಯ ರಸ್ತೆಯ ಬಿಡಿಎ ಕಾಂಪ್ಲೆಕ್ಸ್ ಮುಂದಿನ ರೇಮಂಡ್ ಶೋ ರೂಮ್ ಗೆ ನುಗ್ಗಿರುವ ದುಷ್ಕರ್ಮಿಗಳು ರು.8 ಲಕ್ಷ ದೋಚಿ ಪರಾರಿಯಾಗಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ರಾಜು ಎಂಬುವರಿಗೆ ಸೇರಿದ ರೇಮಂಡ್ ಸೋ ರೂಮ್ ನ ಹಿಂದಿನ ಕಿಟಕಿ ಮುರಿದು ಒಳ ನುಗ್ಗಿರುವ ದುಷ್ಕರ್ಮಿಗಳು ಕ್ಯಾಷ್ ಬಾಕ್ಸ್ ಒಡೆದು ಹಣ ದೋಚಿ ಪರಾರಿಯಾಗಿದ್ದಾರೆ. ಶೋ ರೂಮ್ ಮಾಲೀಕ ರಾಜು ಗುರುವಾರ ಬೆಳಗ್ಗೆ 9.30ರ ಸುಮಾರಿಗೆ ಶೋ ರೂಮ್ ಬಾಗಿಲು ತೆರೆದು ನೋಡಿದಾಗ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ.
ಬಳಿಕ ಜ್ಞಾನಭಾರತಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಮೇರೆಗೆ ಸ್ಥಳಪರಿಶೀಲನೆ ನಡೆಸಿರುವ ಪೊಲೀಸರು, ಶೋ ರೂಮ್ ನ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಸಂಗ್ರಹಿಸಿ ಪರಿಶೀಲಿಸುತ್ತಿದ್ದಾರೆ.