ಕಗಲಗೊಂಬ: ಒಂದೇ ದಿನದಲ್ಲಿ 30 ಮಂದಿಗೆ ವಾಂತಿ ಭೇದಿ
ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಕಾಗಲಗೂಂಬ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಕಳೆದ ಮೂರು ದಿನಗಳಿಂದ ಜನರಿಗೆ ವಾಂತಿ ಭೇದಿ ಆರಂಭವಾಗಿದೆ. ಅಸ್ವಸ್ಥರಾದ ಗ್ರಾಮಸ್ಥರಿಗೆ ಬಾದಾಮಿ ತಾಲೂಕಿನ ಕಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ, ನವನಗರದ ಸರ್ಕಾರಿ ಆಸ್ಪತ್ರೆ, ಕುಮಾರೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮಕ್ಕೆ ಪೂರೈಕೆಯಾಗುವ ನದಿ ನೀರು ಕೊಳವೆಯಲ್ಲಿ ಕಲುಷಿತ ಬೋರ್ವೆಲ್ ನೀರು ಸೇರಿದ್ದರಿಂದ ವಾಂತಿ ಭೇದಿ ಪ್ರಾರಂಭವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸುಮಾರು 30ಕ್ಕೂ ಹೆಚ್ಚು ಜನರು ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಲ್ಲದೆ ಬಾದಾಮಿ ತಾಲೂಕಿನ ಕಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೂರಾರು ಜನರು ದಾಖಲಾಗಿದ್ದಾರೆ.
ಗ್ರಾಮಕ್ಕೆ ಡಿಎಚ್ಒ ಭೇಟಿ: ಗ್ರಾಮಕ್ಕೆ ನೂತನ ಜಿಲ್ಲಾ ಆರೋಗ್ಯಧಿಕಾರಿ ಬಿ.ಡಿ. ಕಿತ್ತೂರ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಗ್ರಾಮಸ್ಥರ ಆರೋಗ್ಯದ ಬಗ್ಗೆ ನಿಗಾವಹಿಸಿದ್ದು, ಮುಂಜಾಗ್ರತ ಕ್ರಮವಾಗಿ 4ರಿಂದ 5 ವೈದ್ಯರನ್ನು ಗ್ರಾಮದಲ್ಲಿ ಠಿಕಾಣಿ ಹೂಡಿದ್ದಾರೆ. ಜೊತೆಗೆ ವಾಂತಿ ಭೇದಿ ಬೇರೆಯವರೆಗೆ ಹರಡದಂತೆ ಎಲ್ಲರಿಗೂ ಮಾತ್ರೆ ನೀಡಲಾಗಿದೆ. ತಾತ್ಕಾಲಿಕವಾಗಿ ಆಸ್ಪತ್ರೆಯೊಂದನ್ನು ತೆರೆಯಲಾಗಿದೆ.
ಎಸ್.ಆರ್. ಪಾಟೀಲ ಭೇಟಿ: ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್. ಆರ್. ಪಾಟೀಲ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ್ ಸರನಾಯಕ್, ಮಾಜಿ ಶಾಸಕ ಜೆ.ಟಿ. ಪಾಟೀಲ್ ಗ್ರಾಮಕ್ಕೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಯೋಗಕ್ಷವು ವಿಚಾರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

