ಬಾಗಲಕೋಟೆ

ಚುನಾವಣೆ ನಂತರ ಕೆಜೆಪಿ ಧೂಳಿಪಟ: ಕಾರಜೋಳ

Published On :

ಮುಧೋಳ: ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಕೆಜೆಪಿ ಪಕ್ಷ ತನ್ನ ಅಸ್ತಿತ್ವ ಕಳೆದುಕೊಳ್ಳಲಿದೆ. ಇದರಿಂದ ಬಿಜೆಪಿ ಬಿಟ್ಟು ಕೆಜಿಪಿಗೆ ಹೋದವರ ಪರಿಸ್ಥಿತಿ ಏನಾಗುತ್ತೆ ಎಂಬುದು ತಿಳಿಯಲಿದೆ ಎಂದು ರಾಜ್ಯ ಸಣ್ಣ ನೀರಾವರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ಇಲ್ಲಿನ ಪುರಸಭೆ ಚುನಾವಣೆ ಸಂದರ್ಭದಲ್ಲಿ ತಮ್ಮ ಪತ್ನಿ ಶಾಂತಾದೇವಿ, ಪುತ್ರ ಅರುಣ ಕಾರಜೋಳ ಅವರೊಂದಿಗೆ ಗುರುವಾರ ಬೆಳಗ್ಗೆ ಮತದಾನ ಮಾಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆ, ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಮತದಾನದ ಕಾಲಾವಕಾಶ ಬಹಳ ಇರಬಾರದು. ಇದರಿಂದ ಅಭ್ಯರ್ಥಿಗಳು ವಾಮಮಾರ್ಗಕ್ಕೆ ಮೊರೆ ಹೋಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಚುನಾವಣೆ ಪ್ರಕ್ರಿಯೆ ಆರಂಭವಾದ ಬಳಿಕ ಮತದಾನದ ಕಾಲಾವಕಾಶ ಕಡಿತಗೊಳಿಸಬೇಕೆಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಇಂತಹ ಮಹತ್ವದ ಹಕ್ಕನ್ನು ಪ್ರತಿಯೊಬ್ಬರು ಚಲಾಯಿಸಬೇಕು ಎಂದರು.   ಮುಧೋಳ ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುತ್ತಾರೆ. ಹೀಗಾಗಿ ಮುಧೋಳ ಪುರಸಭೆ ಆಡಳಿತವನ್ನು ಬಿಜೆಪಿಯೇ ವಹಿಸಿಕೊಳ್ಳಲಿದೆ. ಇದರಲ್ಲಿ ಯಾವುದೇ ಸಂಶಯವಿಲ್ಲ. ಕಾಂಗ್ರೆಸ್ ಮುಖಂಡರ ಕನಸು ಭಗ್ನ ಗೊಳ್ಳಲಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.